ಪಟ್ಟಣದ ಸರ್.ಎಂ. ವಿಶ್ವೇಶ್ವರಯ್ಯ ಸಿಬಿಎಸ್ಸಿ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸುವರ್ಣ ಕರ್ನಾಟಕ- 50ರ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಶನಿವಾರ ಆಚರಿಸಲಾಯಿತು.
ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವಿ.ಬಿ. ಪಾಟೀಲ, ಕಾರ್ಯದರ್ಶಿ ಮಹೇಶಗೌಡ ಪಾಟೀಲ, ಕನ್ನಡ ನಾಡು- ನುಡಿ, ನೆಲ,ಜಲ, ಭಾಷೆಯ ಬಗ್ಗೆ ಮಾತನಾಡಿದರು.
ಸುವರ್ಣ ಕರ್ನಾಟಕ ಸಂಭ್ರಮೋತ್ಸವದ ಅಂಗವಾಗಿ 2022-23ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಗಾಯಿತ್ರಿ ಕಾಲವಾಡ ಹಾಗೂ ಅವರ ಪಾಲಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕನ್ನಡ ಚಿತ್ರಗೀತೆ ಹಾಡುವ ಮೂಲಕ ಸಂಗೀತ ನೃತ್ಯಕ್ಕೆ ಕುಣಿದು ಕುಪ್ಪಳಿಸಿದರು.
ಅಜ್ಜನಗೌಡ ಪಾಟೀಲ, ಈರನಗೌಡ ಪಾಟೀಲ, ಶಿವನಗೌಡ ಪಾಟೀಲ, ಯಲ್ಲಪ್ಪಗೌಡ್ರ ಪಾಟೀಲ, ಪ್ರಾಚಾರ್ಯ ಎಚ್.ವಿ. ಸತೀಶಚಂದ್ರ, ಶಿಕ್ಷಕರು ಇದ್ದರು.