ಜಿಲ್ಲೆ

ಜ.14ರಂದು ‘ಸುವರ್ಣಯುಗ’ ಕೃತಿ ಬಿಡುಗಡೆ



ಮಂಗಳೂರು : ಜನಸೇವಕ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ ಅನಿತಾ ಪಿ. ತಾಕೊಡೆ ಬರೆದಿರುವ ‘ಸುವರ್ಣಯುಗ’ ಕೃತಿ ಬಿಡುಗಡೆ ಸಮಾರಂಭ ಜ.14ರಂದು ಸಾಯಂಕಾಲ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ.
ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಕೃತಿ ಬಿಡುಗಡೆಗೊಳಿಸಲಿದ್ದಾರೆ. ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಅಡ್ಡೆ ರವೀಂದ್ರ ಪೂಜಾರಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ಬಿ.ಕೆ.ಹರಿಪ್ರಸಾದ್, ಹರೀಶ್ ಕುಮಾರ್, ಮಾಜಿ ಸಚಿವರಾದ ವಿನಯ್‌ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಿ.ರಮಾನಾಥ ರೈ, ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ಗೋಪಾಲ ಪೂಜಾರಿ, ರುಕ್ಮಯ ಪೂಜಾರಿ, ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಗಣ್ಯರಾದ ರಾಜಶೇಖರ್ ಕೋಟ್ಯಾನ್, ನವೀನಚಂದ್ರ ಡಿ.ಸುವರ್ಣ, ಡಾ.ಎಂ.ಮೋಹನ್ ಆಳ್ವ, ರೋಹಿಣಿ ಸಾಲಿಯಾನ್, ರವಿ ಎಸ್.ಶೆಟ್ಟಿ, ಮಿಥುನ್ ರೈ, ಸುರೇಂದ್ರ ಎ. ಪೂಜಾರಿ, ವೇದಕುಮಾರ್, ಊರ್ಮಿಳಾ ರಮೇಶ್ ಕುಮಾರ್, ಶಶಿ ಎಂ. ಸಾಲಿಯಾನ್, ಭಾಸ್ಕರ್ ಎಂ. ಸಾಲಿಯಾನ್, ನಿತ್ಯಾನಂದ ಡಿ. ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ನಮ್ಮ ಕುಡ್ಲ ವಾಹಿನಿ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ ಉಪಸ್ಥಿತರಿದ್ದರು.