ಕೊಪ್ಪಳ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ಸ್ಟೇಟ್ ಬ್ಯಾಂಕ್ ಆ್ ಇಂಡಿಯಾ ಆರ್ಸೆಟಿಯಿಂದ ಮಂಗಳವಾರ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಯಿತು. ಸಂಸದ ರಾಜಶೇಖರ ಹಿಟ್ನಾಳ ಸ್ವಚ್ಛತೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಆರ್ಸೆಟಿ ಶಿಬಿರಾರ್ಥಿಗಳು ಸ್ವಚ್ಛತೆ ಮತ್ತು ಪರಿಸರಕ್ಕೆ ಸಂಬಂಧಿಸಿದ ಘೋಷಣೆ ಕೂಗಿ ಜಾಗೃತಿ ಮೂಡಿಸದರು. ಸ್ವಚ್ಛತೆ ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಎಸ್ಬಿಐ ಆರ್ಸೆಟಿ ನಿರ್ದೇಶಕ ರಾಯೇಶ್ವರ ಪೈ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೀರೇಂದ್ರಕುಮಾರ, ಮಹಾದೇವ ಕೀರ್ತಿ, ನಗರ ಸಭೆ ಪೌರ ಕಾರ್ಮಿಕರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.