ಲಕ್ಷ್ಮೇಶ್ವರ: ಗ್ರಾಮೀಣ ಪ್ರದೇಶಗಳ ಜನರಲ್ಲಿ ನೈರ್ಮಲ್ಯ, ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ಸ್ವಚ್ಛತಾಹೀ ಸೇವಾ ಪಾಕ್ಷಿಕ ಆಯೋಜಿಸಲಾಗುತ್ತಿದೆ. ಸೆ.14ರಿಂದ ಅ.2ರವಗೆ ಪರಿಣಾಮಕಾರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲು ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಪಂ ಇಒ ಕೃಷ್ಣಪ್ಪ ಧರ್ಮರ ತಿಳಿಸಿದರು.
ತಾಪಂ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಸ್ವಚ್ಛ ಭಾರತ ದಿನವಾಗಿ ಆಚರಿಸಲಾಗುತ್ತದೆ. 2017ರಿಂದ ಈ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ ನಡೆಸಲಾಗುತ್ತಿದೆ. ಈ ವರ್ಷ ಸ್ವಚ್ಛ ಭಾರತ ಅಭಿಯಾನದ 10ನೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.