ಜಿಲ್ಲೆ

ಸ್ವಸ್ಥ ಶಾಲೆಯಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ

ಸುನಿಲ್ ಪೊನ್ನೇಟಿ

ಸುಂಟಿಕೊಪ್ಪ:

ಜಿಲ್ಲಾಡಳಿತ ಮತ್ತು ವಿವಿಧ ಸಂಘಟನೆಗಳ ಆಶ್ರಯದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಾಲೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.

ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶುಭಾ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತಾನಾಡಿ, ವಿಶೇಷ ಚೇತನರ ಆರೈಕೆದಾರರನ್ನು ಗುರುತಿಸಿ ಅವರಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅವರು ಸಮಾಜದಲ್ಲಿ ಗುರುತಿಸುವಂಥ ಕೆಲಸ ಆಗಬೇಕು, ಇವರಿಗೆ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಇರುವ ಸೇವೆಗಳ ಕುರಿತು ತಿಳಿಸುತ್ತ ಕಾನೂನು ಸಲಹೆಗಳನ್ನು ಉಚಿತವಾಗಿ ನೀಡಲಾಗುವುದು ಎಂದರು.

ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಕೆ.ಜಿ. ವಿಮಲಾ ಪ್ರಾಸ್ತಾವಿಕವಾಗಿ ಮಾತನಾಡಿ ಆರೈಕೆದಾರರ ದಿನಾಚರಣೆ ಕುರಿತು ಮಾಹಿತಿ ನೀಡಿದರು. ಅಂಗವಿಕಲರ ಹಕ್ಕುಗಳ ಅಧಿನಿಯಮ 2016ರ ಅನ್ವಯ 21 ಬಗೆಯ ಅಂಗವಿಕಲತೆಯಲ್ಲಿ ಸೆರಬ್ರಲ್ ಪಾಲಿಸಿ, ಮಸ್ಕ್ರಲ್ ಡಿಸ್ಟ್ರೋಫಿ, ಮಲ್ಟಿಪಲ್ ಸ್ಚೆಲೋರೀಸಸ್ ಹಾಗೂ ಪಾರ್ಕಿನ್ ಸನ್ ವಿಕಲತೆಯುಳ್ಳ ವಿಶೇಷತೇತನರ ಆರೈಕೆದಾರರಿಗೆ ಪ್ರತಿ ತಿಂಗಳು 1 ಸಾವಿರ ರೂ. ಪ್ರೋತ್ಸಾಹ ಧನವನ್ನು ಸರ್ಕಾರ 24- 25 ನೇ ಸಾಲಿಗೆ ಮಂಜೂರು ಮಾಡಿದೆ. ಇದರ ಸೌಲಭ್ಯವನ್ನು ಸಂಬAಧಿಸಿದ ವಿಶೇಷ ಚೇತನರ ಆರೈಕೆದಾರರು ಪಡೆದುಕೊಳ್ಳಬೇಕು. ಆರೈಕೆದಾರರಿಗೆ ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನೇಕ ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಅವರನ್ನು ಆರ್ಥಿಕವಾಗಿ ಸದೃಢರಾಗಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು

ಸ್ವಸ್ಥ ಸಂಸ್ಥೆಯ ನಿರ್ದೇಶಕಿ ಆರತಿ ಸೋಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಟಾಟಾ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಗೌತಮ್ ಮೈನಿ, ಇಲಾಖೆಯ ಸಿಬ್ಬಂದಿ, ಸೋಮವಾರಪೇಟೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ, ಅಂಗನವಾಡಿ ಕಾರ್ಯಕರ್ತರು, ಶಾಲಾ ಶಿಕ್ಷಕರು ಮತ್ತು ವಿಶೇಷ ಚೇತನರ ಪೋಷಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಆಟಿಸಂ ವಿಶೇಷ ಚೇತನತೆ ಕುರಿತು ತರಬೇತಿ ಕಾರ್ಯಗಾರ ಏರ್ಪಡಿಸಲಾಗಿತ್ತು.

ನಂತರ ಸ್ವಸ್ಥ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.