ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕಗೊಂಡ ಹಿನ್ನೆಲೆಯಲ್ಲಿ ರಾಯಚೂರಿನ ಚಂದ್ರವೌಳೇಶ್ವರ ವೃತ್ತದಲ್ಲಿ ಶನಿವಾರ ಬಿಜೆಪಿಯಿಂದ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ನಗರಸಭೆ ಸದಸ್ಯ ಈ.ಶಶಿರಾಜ, ಮುಖಂಡರಾದ ರವೀಂದ್ರ ಜಲ್ದಾರ್, ಮುಕ್ತಿಯಾರ್, ಆಂಜಿನೇಯ ಕಡಗೋಲ ಇದ್ದರು. 
ಜಿಲ್ಲೆ

ಬಿಜೆಪಿಯಿಂದ ಸಿಹಿ ಹಂಚಿ ಸಂಭ್ರಮಾಚರಣೆ

ರಾಚಯ್ಯ ಸ್ವಾಮಿ

ರಾಯಚೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ನೇಮಕಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ನಗರದ ಚಂದ್ರವೌಳೇಶ್ವರ ವೃತ್ತದಲ್ಲಿ ಶನಿವಾರ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.
ಚಂದ್ರವೌಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವಿಜಯೇಂದ್ರ ನೇಮಕದಿಂದ ಪಕ್ಷಕ್ಕೆ ಬಲ ಬಂದಂತಾಗಿದ್ದು, ಪಕ್ಷ ಅವರ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಬಲವರ್ಧನೆಯಾಗಲಿ ಎಂದು ಪ್ರಾರ್ಥಿಸಿದರು.
ನಂತರ ವೃತ್ತದಲ್ಲಿ ಪರಸ್ಪರ ಸಿಹಿ ಹಂಚಿ ಪಕ್ಷ ಮತ್ತು ವಿಜಯೇಂದ್ರ ಪರ ಘೋಷಣೆ ಕೂಗಿ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ನಗರಸಭೆ ಸದಸ್ಯ ಈ.ಶಶಿರಾಜ, ಮುಖಂಡರಾದ ರವೀಂದ್ರ ಜಲ್ದಾರ್, ಮುಕ್ತಿಯಾರ್, ಆಂಜಿನೇಯ ಕಡಗೋಲ ಇದ್ದರು.