ನರೇಂದ್ರ ಮೋದಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ಶ್ರವಣಬೆಳಗೊಳ ಹೋಬಳಿಯ ಹೊಸಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. 
ಜಿಲ್ಲೆ

ಎಸ್.ಹೊಸಹಳ್ಳಿ ಗ್ರಾಮದಲ್ಲಿ ಸಿಹಿ ಹಂಚಿ ಸಂಭ್ರಮ

ಶ್ರವಣಬೆಳಗೊಳ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಹಾಗೂ ಕರ್ನಾಟಕದ ಜೆಡಿಎಸ್ ಪಕ್ಷದ ವರಿಷ್ಠ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶ್ರವಣಬೆಳಗೊಳ ಹಾಗೂ ಹೋಬಳಿಯ ಎಸ್.ಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಜೆಡಿಎಸ್ ಯುವ ಮುಖಂಡ ಎಚ್.ಡಿ.ಚೇತನ್ ಮಾತನಾಡಿ, ದೇಶದಲ್ಲಿ ಎನ್‌ಡಿಎ ಸರ್ಕಾರ ರೂಪುಗೊಳ್ಳಲು ರಾಜ್ಯದ ಪಾತ್ರ ಬಹು ಮುಖ್ಯವಾಗಿದೆ. ಇದಕ್ಕೆ ನಮ್ಮ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ ಅಪಾರವಾಗಿದ್ದು, ಹಳೇ ಮೈಸೂರು ಪ್ರಾಂತ್ಯದಲ್ಲಿ ನಮ್ಮ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದು, ರಾಜ್ಯದಲ್ಲಿ 19 ಸ್ಥಾನ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಲು ಕಾರಣವಾಗಿದೆ ಎಂದರು.

ಕುಮಾರಸ್ವಾಮಿ ಅವರಿಗೆ ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆಯ ಮಂತ್ರಿ ಸ್ಥಾನ ಲಭಿಸಿದ್ದು, ಇದು ನಮ್ಮ ರಾಜ್ಯಕ್ಕೆ ಹೆಮ್ಮೆಯ ಸಂಗತಿ. ಅವರಿಗೆ ಕೇಂದ್ರ ಕೃಷಿ ಸಚಿವ ಸ್ಥಾನ ಲಭಿಸಿದರೆ ನಮ್ಮ ರೈತರ ಪರವಾಗಿ ಉತ್ತಮ ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಮುಖಂಡರಾದ ರಾಮಕೃಷ್ಣೇಗೌಡ, ಬೋರೇಗೌಡ, ಕಿರಣ್‌ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ದಿವಾಕರ್, ಹೊಸಮನೆ ಹರೀಶ್, ಬಿ.ಟಿ.ಮಧು, ಮೀಸೆ ಮಂಜಣ್ಣ, ದಿನೇಶ್, ಶ್ರೀನಿವಾಸ್, ಸಾಗರ್ ಮುಂತಾದವರಿದ್ದರು.