ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ ವಿಭಾಗ) ವತಿಯಿಂದ ಉಡುಪಿ ಎಂಜಿಎಂ ಕಾಲೇಜು ಆಯೋಜಿಸಿದ ಉಡುಪಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾನಗರದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಧಿ 200ಮೀ. ಫ್ರೀಸ್ಟೈಲ್ ಹಾಗೂ 400ಮೀ ಫ್ರೀಸ್ಟೈಲ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಿದ್ದಾಪುರ ಕಡ್ರಿ ದೊಡ್ಮನೆ ದಿ.ಜಯರಾಜ ಶೆಟ್ಟಿ ಹಾಗೂ ಸುಬೀಕ್ಷಾ ಶೆಡ್ತಿ ಪುತ್ರಿ. ಸಾಧಕ ವಿದ್ಯಾರ್ಥಿನಿಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.