ಜಿಲ್ಲೆ

ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಮುಂದಾಗಬೇಕು. ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಅಭಿವೃದ್ಧಿಯ ಕನಸನ್ನು ಸಾಕಾರಗೊಳಿಸಲು ಪ್ರತಿಯೊಬ್ಬರೂ ಶ್ರಮಿಸೋಣ ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ ಹೇಳಿದರು.

ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಹುಬ್ಬಳ್ಳಿ ನಗರ ತಾಲೂಕು ಸ್ವಾತಂತ್ರೊ್ಯೕತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ 77 ನೇ ಸ್ವಾತಂತ್ರೊ್ಯೕತ್ಸವದ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

ರೈತರ ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ. ಸ್ವಾಮಿತ್ವ ಯೋಜನೆಯಡಿ ಆಸ್ತಿ ಸರ್ವೆ ಕಾರ್ಯ ಮಾಡಲಾಗುತ್ತಿದೆ. ಎಲಲ ನಾಗರೀಕರಿಗೂ ಸಮಾನ ಅವಕಾಶ ನೀಡಲಾಗುತ್ತಿದೆ ಎಂದರು

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಭಾರತ ಇಡೀ ಜಗತ್ತಿಗೆ ಮಾರ್ಗದರ್ಶನ ಮಾಡುವ ರಾಷ್ಟ್ರವಾಗಿ ಹೊರಹೊಮ್ಮಿದೆ. ಭಾರತ ಇಂದು ಚಂದ್ರಯಾನದಲ್ಲಿ ಅತ್ಯಂತ ಯಶಸ್ವಿಯಾಗಿದೆ. ವಿಶ್ವದಲ್ಲಿ ಅಪಾರ ಸೖನಿಕ ಶಕ್ತಿಯನ್ನು ರಾಷ್ಟ್ರಗಳಲ್ಲಿ ಭಾರತ ಒಂದಾಗಿದೆ. ಸ್ವಾವಲಂಬಿ ಭಾರತ ನಿಮಾಣವಾಗಿದೆ ಎಂದು ಹೇಳಿದರು.

ಪೊಲೀಸ್ ಇಲಾಖೆಯ ಗೋಪಾಲ ಕೊಟಬಾಗಿ, ದ್ಯಾಮಣ್ಣ ಮಡಿವಾಳರ, ಜಿ.ಎಸ್. ಮರಕಟ್ಟಿ, ಗೃಹ ರಕ್ಷಕ ದಳದ ಕೃಷ್ಣಾ ಬ್ಯಾಡಗಿ, ಹನುಮಂತರಾಯ ಈಳಗೇರ, ಗಣೇಶ ಬಾಲೆಸೂರ ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆಗಳಿಗೆ ಆಕರ್ಷಕ ನೃತ್ಯ ಪ್ರದರ್ಶಿಸಿದರು. ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಮೇಯರ್ ವೀಣಾ ಭರದ್ವಾಡ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ, ಅಪರ ತಹಸೀಲ್ದಾರ ಜಿ.ವಿ. ಪಾಟೀಲ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖೊ್ಯೕಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಜರಿದ್ದರು.