ತಿ.ನರಸೀಪುರ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಕಾರ್ಯದರ್ಶಿಯಾಗಿ ತಾಲೂಕಿನ ಯಡದೊರೆ ಗ್ರಾಮ ತಹಿರೀಂ ಅವರನ್ನು ನೇಮಕ ಮಾಡಲಾಗಿದೆ.
ವರುಣ ವಿಧಾನಸಭಾ ಕ್ಷೇತ್ರದ ಪ್ರವಾಸ ಕೈಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮೊಸನಬಾಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಹಿರೀಂ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ, ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಲಹೆ ನೀಡಿದರು.
ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಮೋಸಿನ್ ಖಾನ್, ಗರ್ಗೇಶ್ವರಿ ಗ್ರಾ.ಪಂ. ಉಪಾಧ್ಯಕ್ಷ ಸಿದ್ದರಾಜು, ಮುಖಂಡರಾದ ಅಕ್ಬರ್ ಪಾಷ, ಫಯಾಜ್ ಅಹಮದ್, ಮಹಮ್ಮದ್ ಪಾಷ, ಮಹೇಶ, ಗಿರೀಶ್, ಸಾಬು, ಇದ್ರಿಶ್ ಇತರರು ಇದ್ದರು.