ಮಂಗಳೂರು: ಟೈಲರ್‌ಗಳ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮುಖ್ಯಮಂತಿ ಬಸವರಾಜ ಬೊಮ್ಮಾಯಿ ಅವರಿಗೆ ಅಸೋಸಿಯೇಶನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ವಿದ್ಯಾನಿಧಿ, ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ ಸೇರಿದಂತೆ ಯೋಜನೆಗಳ ಜಾರಿಗೆ ಚಿಂತನೆ ನಡೆಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಸಚಿವ ಸುನಿಲ್ ಕುಮಾರ್ ಅವರ ಸಹಕಾರದಲ್ಲಿ ಸಿಎಂ ಭೇಟಿ ಮಾಡಲಾಯಿತು. ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರೀಶ್ ಪೂಂಜ ಜತೆಗಿದ್ದರು.
ನಿಯೋಗದಲ್ಲಿ ಅಸೋಸಿಯೇಶನ್ ರಾಜ್ಯ ಅಧ್ಯಕ್ಷ ನಾರಾಯಣ, ಪ್ರ.ಕಾರ್ಯದರ್ಶಿ ಪ್ರಜ್ವಲ್ ಕುಮಾರ್, ಕೋಶಾಧಿಕಾರಿ ರಾಮಚಂದ್ರ ಉಡುಪಿ, ರಾಜ್ಯ ಸಮಿತಿ ಸದಸ್ಯರಾದ ಸುರೇಂದ್ರ, ವಿಜಯ್, ಉಡುಪಿ ಜಿಲ್ಲಾ ಅಧ್ಯಕ್ಷ ಗುರುರಾಜ್ ಶೆಟ್ಟಿ, ಉಡುಪಿ ಕ್ಷೇತ್ರ ಅಧ್ಯಕ್ಷ ದಯಾನಂದ ಕೋಟ್ಯಾನ್, ಸಮಿತಿ ಸದಸ್ಯರಾದ ರಾಘವೇಂದ್ರ ಹೆಬ್ರಿ, ವಿಜಯ್ ಹಾಂಡ,, ಭೋಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.