ಜಿಲ್ಲೆ

ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

ಸೌಮ್ಯ ಆರ್

ಬೆಳ್ತಂಗಡಿ: ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಅರಸಿನಮಕ್ಕಿ ಗ್ರಾ.ಪಂ., ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ತುಂಬೆತ್ತಡ್ಕದಲ್ಲಿ ನಡೆಯಿತು.

ಸಹಕಾರಿ ಸಂಘ ಅಧ್ಯಕ್ಷ ರಾವೇಂದ್ರ ನಾಯಕ್ ಬರ್ಗು ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಸಿಇಒ ಸ್ವರ್ಣಗೌರಿ, ತುಂಬೆತ್ತಡ್ಕ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶ್ರೀ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷ ಸುರೇಶ್ ವಿ., ಅರಸಿನಮಕ್ಕಿ ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಎಂ.ಎಸ್., ಸೇವಾಧಾಮ ಸಂಸ್ಥಾಪಕ ಕೆ.ವಿನಾಯಕ ರಾವ್, ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕಿ ಬೇಬಿ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಬಬಿತಾ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿ ನೀತಾ ರಾಧೇಶ್ ಆಚಾರ್ಯ, ಟೈಲರಿಂಗ್ ತರಬೇತುಗಾರ್ತಿ ಪ್ರತಿಮಾ ಉಪಸ್ಥಿತರಿದ್ದರು.

ಒಟ್ಟು 40 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಸುನಂದಾ ಸ್ವಾಗತಿಸಿದರು. ಸೇವಾಭಾರತಿಯ ಸುಮಾ ನಿರೂಪಿಸಿದರು. ಆಶಾ ವಂದಿಸಿದರು.