ಗಂಗಾವತಿ: ಧರ್ಮಸ್ಥಳ ಪ್ರಕರಣದಲ್ಲಿ ಪ್ರಗತಿಪರ ಸಂಘಟನೆಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿಯಿಂದ ಬುಧವಾರ ನಗರದ ತಾಲೂಕಾಡಳಿತ ಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ:ಸೆಸ್ಕ್ ಕಚೇರಿ ಎದುರು ಪ್ರತಿಭಟನೆ
ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ, ಧರ್ಮಸ್ಥಳದಲ್ಲಿ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿವೆ. ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ ನಡೆಸುತ್ತಿದೆ. ಆದರೆ, ಬಿಜೆಪಿ ಮುಖಂಡರು ತನಿಖೆ ಮಾಡಲು ಬಿಡದೇ ಪ್ರಗತಿಪರ ಸಂಘಟನೆಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ಸರಿಯಲ್ಲ. ಆದ್ದರಿಂದ ಬಿಜೆಪಿ ಮುಖಂಡರು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿ ಗ್ರೇಡ್-2 ತಹಸೀಲ್ದಾರ್ ಮಹಾಂತಗೌಡಗೌಡರ್‌ಗೆ ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಮಾರುತಿ, ವೆಂಕಟೇಶ ಯಾದವ್, ದೊಡ್ಡಬಸವ, ಹನುಮೇಶ, ಸಂತೋಷ ಇತರರಿದ್ದರು.