ಜಿಲ್ಲೆ

ಅಕ್ರಮ ಚಟುವಟಿಕೆ ತಡೆಗಟ್ಟಿ

Dharwada - Santosh Vaidya

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಸ್ಪಾ, ಮಸಾಜ್ ಸೆಂಟರ್​ಗಳು ಅಕ್ರಮ ಚಟುವಟಿಕೆಗಳ ತಾಣಗಳಾಗಿ ಮಾರ್ಪಟ್ಟಿವೆ. ಇಲ್ಲಿ ಅನೇಕ ಅಕ್ರಮ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಲೇ ಬಂದಿವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಆಗ್ರಹಿಸಿದ್ದಾರೆ.

ಈ ಕುರಿತು ಹು-ಧಾ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿರುವ, ಕೆಲವು ಸ್ಪಾ, ಮಸಾಜ್ ಸೆಂಟರ್​ಗಳು ಪರವಾನಗಿ ಕೂಡ ಹೊಂದಿಲ್ಲ. ಇವುಗಳ ಅಕ್ರಮವನ್ನು ತಡೆಗಟ್ಟುವಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವಿಫಲರಾಗಿದ್ದು, ಪೊಲೀಸ್ ಇಲಾಖೆ ಕೂಡ ನಿರ್ಲಕ್ಷ್ಯ ತೋರುತ್ತಿರುವುರಿಂದ ಅಕ್ರಮ ಚಟುವಟಿಕೆಗಳಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಆರೋಪಿಸಿದ್ದಾರೆ.

ಅವಳಿನಗರದ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಎನ್. ಶಶಿಕುಮಾರ್ ಅವರು ರೌಡಿಸ್ಂ, ಡ್ರಗ್ಸ್ ಹಾವಳಿ ಹಾಗೂ ಜೂಜಾಟವನ್ನು ಹತ್ತಿಕ್ಕಿದ್ದು ನಾಗರಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇದರಿಂದ ಜನತೆ ನಿಟ್ಟುಸಿರು ಬಿಡುವಂತಾಗಿದೆ. ಅದೇ ರೀತಿ ಸ್ಪಾ, ಮಸಾಜ್ ಸೆಂಟರ್​ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರ ದಿಟ್ಟ ಕ್ರಮ ಅವಶ್ಯಕವಾಗಿದೆ ಎಂದು ಹೇಳಿದ್ದಾರೆ.