ತಾವರಗೇರಾ ನಾಡಕಚೇರಿ ಗ್ರಾಮ ಲೆಕ್ಕಾಧಿಕಾರಿ ಸೂರ್ಯಕಾಂತಗೆ ಕರ್ನಾಟಕ ರೈತ ಸಂಘ ಹಾಗೂ ಸಿಪಿಐಎಂಎಲ್ ಕಾರ್ಯಕರ್ತರು ಮನವಿ ಸಲ್ಲಿಸಿದರು. ಪ್ರಮುಖರಾದ ಡಿ.ಎಚ್.ಪೂಜಾರ, ಬಸವರಾಜ ಯರದಾಳ, ನಿರುಪಾದಿ, ಶಾಮಿದ್ ಸಾಬ್, ದ್ಯಾಮಮ್ಮ, ರಗಡಪ್ಪ, ಹನುಮಂತಪ್ಪ, ಶೇಖರಪ್ಪ ಇತರರಿದ್ದರು. 
ಜಿಲ್ಲೆ

ಹಲ್ಲೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳಿ

ಗಾಯತ್ರಿ ಮಾಲಿಪಾಟೀಲ್

ತಾವರಗೇರಾ: ಕೊಪ್ಪಳದಲ್ಲಿ ಇತ್ತೀಚೆಗೆ ಬಲ್ಡೋಟಾ ಕಂಪನಿಯಿಂದ ಕುರಿಗಾಹಿಗಳು ಮತ್ತು ರೈತರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರೈತ ಸಂಘ ಹಾಗೂ ಸಿಪಿಐಎಂಎಲ್ ಕಾರ್ಯಕರ್ತರು ಮಂಗಳವಾರ ನಾಡಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಸೂರ್ಯಕಾಂತಗೆ ಮನವಿ ಸಲ್ಲಿಸಿದರು. ಮುಖಂಡ ಡಿ.ಎಚ್.ಪೂಜಾರ್ ಮಾತನಾಡಿ, ಬಲ್ಡೋಟಾ ಕಂಪನಿ ಅಧಿಕಾರಿಗಳು ರೈತರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಂಪನಿಯ ಕಾನೂನು ವಿರೋಧಿ ಚಟುವಟಿಕೆಗಳನ್ನು ಖಂಡಿಸಿ ಎರಡು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.