ಕಮತಗಿ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯಲ್ಲಿ ರಾಜೇಸಾಬ ಕೋಲಾರ ಮಾತನಾಡಿದರು. ಪಪಂ ಅಧ್ಯಕ್ಷ ರಮೇಶ ಜಮಖಂಡಿ, ಪಿಎಸ್‌ಐ ಜ್ಯೋತಿ ವಾಲಿಕಾರ ಇದ್ದರು. 
ಜಿಲ್ಲೆ

ಗಾಂಜಾ ಹಾವಳಿ ವಿರುದ್ಧ ಕ್ರಮ ಕೈಗೊಳ್ಳಿ

ದತ್ತಾತ್ರೇಯ ಪಿ ಕುಲಕರ್ಣಿ

ಕಮತಗಿ: ಪಟ್ಟಣದ ವಿವಿಧೆಡೆ ಗಾಂಜಾ ಹಾವಳಿ ಹೆಚ್ಚಾಗಿದ್ದು, ಪೊಲೀಸ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ರಾಜೇಸಾಬ ಕೋಲಾರ ಹೇಳಿದರು.

ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಅಮೀನಗಡ ಆರಕ್ಷಕ ಠಾಣೆ ವತಿಯಿಂದ ಹೋಳಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದ ಅವರು, ಗಾಂಜಾ ಮಾರಾಟ ಬಗ್ಗೆ ನಾನು ಪೊಲೀಸರ ಗಮನಕ್ಕೆ ತಂದಾಗ ಅರ್ಧ ಕೆಜಿ ಗಾಂಜಾ ಸಿಕ್ಕರೂ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಜಾತ್ರೆ, ಹಬ್ಬಗಳ ಸಂದರ್ಭದಲ್ಲಿ ಕಿಡಿಗೇಡಿಗಳು ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಾರೆ ಎಂದರು.

ಅಮೀನಗಡ ಪಿಎಸ್‌ಐ ಜ್ಯೋತಿ ವಾಲಿಕಾರ ಮಾತನಾಡಿ, ಗಾಂಜಾ ಹಾವಳಿ ಬಗ್ಗೆ ನಮಗೆ ಮಾಹಿತಿಯಿಲ್ಲ. ನಿಮ್ಮಲ್ಲಿ ಅಧಿಕೃತ ಮಾಹಿತಿ ಇದ್ದರೆ ಯಾವುದೇ ಮುಲಾಜು ಇಲ್ಲದೆ ಕ್ರಮ ಕೈಗೊಳ್ಳುತ್ತೇವೆ. ವೈಯಕ್ತಿಕ ದ್ವೇಷ ಇಟ್ಟುಕೊಂಡು ಸುಳ್ಳು ಮಾಹಿತಿ ನೀಡಬಾರದು ಎಂದರು.