ಬಾದಾಮಿಯ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಮಕ್ಕಳ ಪಾಲನೆ, ಪೋಷಣೆ ರಕ್ಷಣೆ ಕುರಿತು ತಾಲುಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಮಾತನಾಡಿದರು. ತಹಸೀಲ್ದಾರ್ ಮಧುರಾಜ, ಸಿಪಿಐ ಕರೆಪ್ಪ ಬನ್ನೆ ಇದ್ದಾರೆ. 
ಜಿಲ್ಲೆ

ಬಾಲ್ಯವಿವಾಹ ತಡೆಗೆ ಕ್ರಮ ವಹಿಸಿ

ಬಾದಾಮಿ: ಗ್ರಾಮೀಣ ಭಾಗಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಮಕ್ಕಳ ಪಾಲನೆ, ಪೋಷಣೆ ರಕ್ಷಣೆ ಕುರಿತು ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬಾಲ್ಯ ವಿವಾಹ ನಡೆಯುವುದು ಗ್ರಾಮದಲ್ಲಿ ಎಲ್ಲರಿಗೂ ಗೊತ್ತಿರುತ್ತದೆ. ಆದ್ದರಿಂದ ಅಂಗನವಾಡಿ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಸೇರಿ ಎಲ್ಲ ಅಧಿಕಾರಿಗಳು ನಿಗಾ ವಹಿಸಿ ಇಂತಹ ಪ್ರಕರಣಗಳನ್ನು ನಡೆಯದಂತೆ ನೋಡಿಕೊಳ್ಳಬೇಕು. ಮಕ್ಕಳ ಪಾಲನೆ-ಪೋಷಣೆ ಹಾಗೂ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು.

ಹಾಸ್ಟೆಲ್‌ಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದರು. ವೇದಿಕೆಯ ಮೇಲೆ ತಹಸೀಲ್ದಾರ್ ಮಧುರಾಜ, ಸಿಪಿಐ ಕರೆಪ್ಪ ಬನ್ನೆ ಉಪಸ್ಥಿತರಿದ್ದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ, ಬಿ.ಪಿ.ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ.ಪಾಟೀಲ, ಸಿಡಿಪಿಒ ದಸ್ತಗೀರಸಾಬ ಮುಲ್ಲಾ ಮತ್ತಿತರರಿದ್ದರು.