ಹದಗೆಟ್ಟಿರುವ ಗದ್ವಾಲ್ ರಸ್ತೆಯನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಲೋಕ ಜನಶಕ್ತಿ ಪದಾಕಾರಿಗಳು ರಾಯಚೂರಿನ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಲಾಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಎಲ್.ರಂಗಪ್ಪ, ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಜಿ.ವೆಂಕಟರೆಡ್ಡಿ, ಪದಾಕಾರಿಗಳಾದ ನಾರಾಯಣ ಕರ್ಲಿ, ಶೇಖರಗೌಡ, ಜಿ.ಗೋಪಾಲರೆಡ್ಡಿ ಇದ್ದರು. 
ಜಿಲ್ಲೆ

ಗದ್ವಾಲ್ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಿ

ರಾಚಯ್ಯ ಸ್ವಾಮಿ

ರಾಯಚೂರು: ನಗರದ ಬಸವನಬಾವಿ ವೃತ್ತದಿಂದ ಗದ್ವಾಲ್‌ಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರು ಓಡಾಡಲು ಯೋಗ್ಯವಿಲ್ಲದಂತಾಗಿದೆ. ಕೂಡಲೇ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಬೇಕು ಎಂದು ಲೋಕ ಜನಶಕ್ತಿ ಜಿಲ್ಲಾ ಘಟಕ ಒತ್ತಾಯಿಸಿದೆ.
ಪಕ್ಷದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಿ, ರಸ್ತೆ ನಿರ್ಮಾಣ ಕಾರ್ಯ ನನೆಗುದಿಗೆ ಬಿದ್ದಿದ್ದು, ರಸ್ತೆ ಕೆಸರುಗದ್ದೆಯಂತಾಗಿ ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ ಎಂದು ದೂರಿದರು.
ಸಾರ್ವಜನಿಕರು, ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ರಸ್ತೆ ಹದಗೆಟ್ಟಿರುವುದರಿಂದ ಸಮಸ್ಯೆ ಎದುರಿಸುವಂತಾಗಿದೆ. ಗದ್ವಾಲ್‌ಗೆ ಸಂಚರಿಸುವ ಬಸ್‌ಗಳು ಹಾಗೂ ರೈಸ್‌ಮಿಲ್‌ಗೆ ಹೋಗುವ ವಾಹನಗಳು ಅಪಘಾತಕ್ಕೀಡಾಗಿ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಎಲ್.ರಂಗಪ್ಪ, ಕಿಸಾನ್ ಘಟಕದ ರಾಜ್ಯಾಧ್ಯಕ್ಷ ಜಿ.ವೆಂಕಟರೆಡ್ಡಿ, ಪದಾಕಾರಿಗಳಾದ ನಾರಾಯಣ ಕರ್ಲಿ, ಶೇಖರಗೌಡ, ಜಿ.ಗೋಪಾಲರೆಡ್ಡಿ, ತಿಮ್ಮಪ್ಪ ಸ್ವಾಮಿ, ರಘುನಂದನ ಯಾದವ್ ಇದ್ದರು.