ಜಿಲ್ಲೆ

ಸರ್ಕಾರಿ ಸವಲತ್ತುಗಳ ಪ್ರಯೋಜನ ಪಡೆದುಕೊಳ್ಳಿ

ಶಿರಸಿ: ಮಕ್ಕಳಿಗೆ ಶೈಕ್ಷಣಿಕವಾಗಿ ಅನುಕೂಲವಾಗಲು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಗಿತ್ತಿದೆ. ಇವುಗಳ ಪ್ರಯೋಜನ ಪಡೆದು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಜಿ.ಪಂ ಸಭಾಂಗಣದಲ್ಲಿ ಮಂಗಳವಾರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ವಿುಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ವಿುಕರ ಮಕ್ಕಳಿಗೆ ಶಾಲಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಸರ್ಕಾರ ನೀಡುವ ಸೌಲಭ್ಯ ಪಡೆಯಲು ಎಲ್ಲ ಕಾರ್ವಿುಕರು ಕಾರ್ವಿುಕ ಇಲಾಖೆಯಲ್ಲಿ ಕಡ್ಡಾಯ ನೋಂದಣಿ ಮಾಡಿಸಿಕೊಳ್ಳಬೇಕು. ಶ್ರಮಿಕ ವರ್ಗವನ್ನು ಸ್ವಾವಲಂಬಿಯಾಗಿಸಲು ಸರ್ಕಾರ ಹಲವು ಸೌಲಭ್ಯ ಕಲ್ಪಿಸುತ್ತಿದೆ ಎಂದರು.

ತಾಲ್ಲೂಕಿನಲ್ಲಿ 7567 ಕಾರ್ವಿುಕರ ನೋಂದಣಿಯಾಗಿದ್ದು, ಉಳಿದ ಕಾರ್ವಿುಕರು ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆ ಮೂಲಕ ಸರ್ಕಾರದ ಸೌಲಭ್ಯ ಪಡೆಯಬೇಕು ಎಂದರು. ಕಾರ್ವಿುಕ ಕಲ್ಯಾಣಾಧಿಕಾರಿ ವೀಣಾ ಮಾಸ್ತಿ ಇತರರಿದ್ದರು.