ಸಿಂಧನೂರು: ವಿದ್ಯಾರ್ಥಿಗಳು ಶಾಲೆ ತಪ್ಪಿಸದೆ ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಲಭಿಸುತ್ತದೆ ಎಂದು ಮುಖ್ಯಶಿಕ್ಷಕ ಶರಣಪ್ಪ ಹೇಳಿದರು. ನಗರದ ಬಡಿಬೇಸ್ ಸಹಿಪ್ರಾ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರ ಸಮವಸ್ತ್ರ, ಬಿಸಿಯೂಟ ಮತ್ತು ಪುಸ್ತಕಗಳನ್ನು ವಿತರಿಸಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದೆ ಎಂದರು.