ಬಸವನಬಾಗೇವಾಡಿಯ ಗಣೇಶ ನಗರದಲ್ಲಿ ನಮ್ಮ ಕ್ಲಿನಿಕ್‌ನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಸಹಕಾರಿ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಶಂಕರಗೌಡ ಬಿರಾದಾರ ಇತರರಿದ್ದರು. 
ಜಿಲ್ಲೆ

ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಿ

Vijayapura - Desk - Gurappa Lokuri

ಬಸವನಬಾಗೇವಾಡಿ: ಸರ್ವರಿಗೂ ಸಮಪಾಲು, ಸಮಬಾಳು ಎಂಬ ತತ್ವದ ಅಡಿಯಲ್ಲಿ ರಾಜ್ಯ ಸರ್ಕಾರ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನತೆ ಅವುಗಳ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದ ಗಣೇಶ ನಗರದಲ್ಲಿ ಮಂಗಳವಾರ ಮೂರನೇ ಹಂತದ ನಮ್ಮ ಕ್ಲಿನಿಕ್ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಪ್ರತಿಯೊಬ್ಬರಿಗೂ ಆರೋಗ್ಯ, ಶಿಕ್ಷಣ, ಕುಡಿಯುವ ನೀರು, ಉದ್ಯೋಗ, ವಿದ್ಯುತ್, ರಸ್ತೆ ಸೇರಿ ಮೂಲ ಸೌಲಭ್ಯಗಳು ದೊರಕಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯ ಯೋಜನೆ ರೂಪಿಸಿದೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಸಹಕಾರಿ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಶಂಕರಗೌಡ ಬಿರಾದಾರ, ಸಂಗಮೇಶ ಓಲೆಕಾರ, ರವಿ ರಾಠೋಡ, ರೇಖಾ ಪರಶುರಾಮ ಬೆಕಿನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತ್ ಗುಣಾರಿ, ಡಾ. ಕೆಸರ್‌ಸಿಂಗ್ ಗುಂಡಬಾವಡಿ, ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ದೊಡ್ಡಮನನಿ, ಡಾ. ಪ್ರೀತಿ, ಲತಾ ಬಿರಾದಾರ, ಸಂಗಪ್ಪ ಮೇಟಿ, ರಾಜಶೇಖರ್ ಚಿಂಚೋಳಿ ಉಪಸ್ಥಿತರಿದ್ದರು.