ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭಿಸಲಾಗಿರುವ ಉದ್ಯೋಗವಕಾಶ ಮತ್ತು ಕಲಿಕಾ ಕೇಂದ್ರವನ್ನು ಜಿಲ್ಲಾಕಾರಿ ಚಂದ್ರಶೇಖರ ನಾಯಕ ಸೋಮವಾರ ಉದ್ಘಾಟಿಸಿ ಮಾತನಾಡಿದರು. ಎಸ್ಪಿ ಬಿ.ನಿಖಿಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಾಕಾರಿ ಯುಸ್ೂ ಅಲಿ, ಹೆಡ್ ಹೆಲ್ಡ್ ಹೈ ಸಂಸ್ಥೆ ಸಿಇಒ ಪಂಕಜ್ ಸಿಂಗ್, ನಿರ್ದೇಶಕರಾದ ಮಂಜುನಾಥ, ದೇವಶೀಶ ದೋಬೆ ಇದ್ದರು. 
ಜಿಲ್ಲೆ

ಉದ್ಯೋಗವಕಾಶ ಕಲಿಕಾ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ

ರಾಚಯ್ಯ ಸ್ವಾಮಿ

ರಾಯಚೂರು: ಪದವೀಧರ ಹಾಗೂ ನಿರುದ್ಯೋಗಿ ಯುವಜನರಿಗೆ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯಾಭಿವೃದ್ಧಿ ನೀಡುವ ನಿಟ್ಟಿನಲ್ಲಿ ಆರಂಭಿಸಲಾಗಿರುವ ಕಲಿಕಾ ಕೇಂದ್ರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಆರಂಭಿಸಲಾಗಿರುವ ಉದ್ಯೋಗವಕಾಶ ಮತ್ತು ಕಲಿಕಾ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿ, ಉದ್ಯೋಗಕ್ಕೆ ಬೇಕಾದ ಕೌಶಲ್ಯವನ್ನು ಯುವಜನರು ಅರಿತುಕೊಳ್ಳಬೇಕು ಎಂದರು.
ನಿರುದ್ಯೋಗಿಗಳಿಗೆ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಕೇಂದ್ರವನ್ನು ಆರಂಭಿಸಲಾಗಿದ್ದು, ಕೇಂದ್ರದಲ್ಲಿ ತರಬೇತಿ ಪಡೆದುಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು.
ಪದವಿ ಹಂತದ ವಿದ್ಯಾರ್ಥಿಗಳು ಕೂಡಾ ತಮಗೆ ಬೇಕಾದ ಉದ್ಯೋಗದ ಮಾಹಿತಿ ಪಡೆದುಕೊಳ್ಳಬೇಕು. ಜತೆಗೆ ಅಗತ್ಯ ತರಬೇತಿಯನ್ನು ಪಡೆಯಬಹುದಾಗಿದೆ. ಕೇಂದ್ರದಲ್ಲಿ 25 ಕಂಪ್ಯೂಟರ್‌ಗಳ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ತಮಗೆ ಬೇಕಾದ ಉದ್ಯೋಗಾವಕಾಶಗಳ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್ ಮಾತನಾಡಿ, ಮಹಿಳೆಯರು ಜೀವನದಲ್ಲಿ ಮುಂದೆ ಬರಲು ಅವಕಾಶಗಳನ್ನು ಹುಡುಕಿಕೊಂಡು ಹೋಗಬೇಕು. ಇಲ್ಲಿಯೇ ಇದ್ದು ಏನನ್ನ್ನು ಸಾಸಲು ಸಾಧ್ಯವಾಗುವುದಿಲ್ಲ. ಬೇರೆ ಕಡೆ ಹೋಗಿ ಕೆಲಸ ಮಾಡಿದಾಗ ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯವಿದೆ.
ಮಾಹಿತಿ ತಂತ್ರಜ್ಞಾನ ಬೆಳೆಯುತ್ತಿದೆ. ಅದರಂತೆ ನಾವು ಬೆಳೆಯಬೇಕು. ರಾಜ್ಯದಲ್ಲಿ ಸಾಕಷ್ಟು ಉದ್ಯೋಗವಕಾಶಗಳಿವೆ. ತರಬೇತಿ ಮತ್ತು ಮಾಹಿತಿ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಬಹುದಾಗಿದೆ. ಉದ್ಯೋಗಕ್ಕೆ ಬೇಕಾದ ಕೌಶಲ್ಯವನ್ನು ಕೇಂದ್ರದಲ್ಲಿ ತರಬೇತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಾಕಾರಿ ಯುಸ್ೂ ಅಲಿ, ಹೆಡ್ ಹೆಲ್ಡ್ ಹೈ ಸಂಸ್ಥೆ ಸಿಇಒ ಪಂಕಜ್ ಸಿಂಗ್, ನಿರ್ದೇಶಕರಾದ ಮಂಜುನಾಥ, ದೇವಶೀಶ ದೋಬೆ ಉಪಸ್ಥಿತರಿದ್ದರು.