ರಾಯಚೂರು-ಗಂಗಾವತಿ ಮುಖ್ಯರಸ್ತೆ ವಿಸ್ತರಣೆ ಮಾಡುವಂತೆ ಒತ್ತಾಯಿಸಿ ಕಾರಟಗಿ ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆ ಹೂಸೂರುಗೆ ಜಾಗೃತ ಯುವಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ಅಯ್ಯಪ್ಪ ಉಪ್ಪಾರ, ಶರಣಪ್ಪ ಕುಂಬಾರ, ದಲಾಲಿ ವರ್ತಕರ ಸಂಘದ ಅಧ್ಯಕ್ಷ ಬಸವರಾಜ ಪಗಡದಿನ್ನಿ, ರೈತ ಮುಖಂಡ ನಾರಾಯಣ ಈಡಿಗೇರ್, ಪ್ರಭುರಾಜ ಬೂದಿ ಮುಖ್ಯಾಧಿಕಾರಿ ಸುರೇಶ್, ಪಿಎಸ್‌ಐ ಕಾಮಣ್ಣ ನಾಯ್ಕ ಇತರರಿದ್ದರು. 
ಜಿಲ್ಲೆ

ಅಪಘಾತ ನಿಯಂತ್ರಿಸಲು ಸೂಕ್ತ ಕ್ರಮ ವಹಿಸಿ

ರುದ್ರಪ್ಪ ವಾಲಿ

ಕಾರಟಗಿ: ಪಟ್ಟಣದ ರಾಯಚೂರು-ಗಂಗಾವತಿ ಮುಖ್ಯರಸ್ತೆ ವಿಸ್ತರಣೆ ಸೇರಿದಂತೆ ವಾಹನ ನಿಲುಗಡೆಗೆ ಸೂಕ್ತ ಸ್ಥಳ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಜಾಗೃತ ಯುವಕ ಸಂಘ ಅಧ್ಯಕ್ಷ ಬಸವರಾಜ ಶೆಟ್ಟರ್ ನೇತೃತ್ವದಲ್ಲಿ ಪದಾಧಿಕಾರಿಗಳು ಪುರಸಭೆ ಅಧ್ಯಕ್ಷೆ ರೇಖಾ ರಾಜಶೇಖರ ಆನೆಹೂಸೂರುಗೆ ಮಂಗಳವಾರ ಮನವಿ ಸಲ್ಲಿಸಿದರು.

ಸಂಘದ ಮಾಜಿ ಅಧ್ಯಕ್ಷ ತಾಯಪ್ಪ ಕೋಟ್ಯಾಳ, ಪ್ರಹ್ಲಾದ್ ಜೋಶಿ ಮಾತನಾಡಿ, ತಾಲೂಕು ಕೇಂದ್ರವಾಗಿರುವ ಪಟ್ಟಣ ಹತ್ತು ಹಲವು ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದೆ. ಸರ್ಕಾರಿ ಕೆಲಸ ಕಾರ್ಯಗಳಿಗೆ ದಿನ ನಿತ್ಯ ಸಾವಿರಾರು ಜನ ಅಲೆದಾಡುತ್ತಾರೆ. ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಇದರಿಂದ ಸಂಚಾರ ದಟ್ಟನೆ ಹಾಗೂ ಶಾಲಾ ಮಕ್ಕಳಿಗೆ ರಸ್ತೆ ದಾಟುವುದು ಸಮಸ್ಯೆಯಾಗುತ್ತಿದೆ.

ಹೀಗಾಗಿ ಪುರಸಭೆ ಹಾಗೂ ಪೊಲೀಸ್ ಇಲಾಖೆ ಸಂಬಂಧಪಟ್ಟ ರಾಜ್ಯ ಹೆದ್ದಾರಿ ನಿರ್ವಹಿಸುವ ಟೋಲ್ ಕಂಪನಿಯವರ ಜೊತೆ ಮಾತನಾಡಿ, ರಸ್ತೆ ವಿಸ್ತರಣೆ ಮಾಡಬೇಕು. ಹಳೇ ಬಸ್ ನಿಲ್ದಾಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂಪೌಂಡ್ ಮುಂದೆ ಅವಕಾಶ ಕಲ್ಪಿಸಿಕೊಡಬೇಕು. ಜನನೀಬಿಡ ಸ್ಥಳ, ಶಾಲೆ, ಕಾಲೇಜುಗಳ ಹತ್ತಿರ ಹಂಪ್ಸ್ ನಿರ್ಮಿಸಬೇಕು. ಪಟ್ಟಣದ ಕನಕದಾಸ ವೃತ್ತ, ಹಳೇ ಬಸ್ ನಿಲ್ದಾಣ, ಎಪಿಎಂಸಿಯಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದರು.