ಮಸ್ಕಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಮಲ್ಲಯ್ಯ ಅಂಬಾಡಿ, ಮಲ್ಲಪ್ಪ ಅಂಕುಶದೊಡ್ಡಿ, ಬಸವಂತರಾಯ ಕುರಿ, ಪಂಪಣ್ಣ ಗುಂಡಳ್ಳಿ, ಸಿದ್ದಣ್ಣ ಹೂವಿನಬಾವಿ ಇತರರಿದ್ದರು. 
ಜಿಲ್ಲೆ

ಅಪಪ್ರಚಾರಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ

ಮಸ್ಕಿ: ಶ್ರೀಕ್ಷೇತ್ರ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಬಿಜೆಪಿ ಮುಖಂಡರು ಗುರುವಾರ ‘ಧರ್ಮದ ಉಳಿವಿಗಾಗಿ ಧರ್ಮಯುದ್ಧ’ ಹೆಸರಿನಲ್ಲಿ ಪ್ರತಿಭಟನೆ ನಡೆಸಿದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಹಿಂದುಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅನಗತ್ಯವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ಹಿಂದುಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ ಮಾತನಾಡಿ, ರಾಜ್ಯದಲ್ಲಿ ಕೆಲ ಪಟ್ಟಭದ್ರಹಿತಾಸಕ್ತಿಗಳು ಹಿಂದುಗಳ ದೇವಾಲಯ, ಗುರುಗಳ ಬಗ್ಗೆ ಷಡ್ಯಂತ್ರ ರೂಪಿಸಿ ಅಪಪ್ರಚಾರದಲ್ಲಿ ತೊಡಗಿವೆ. ಅಂಥವರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿದ್ದು, ವಿಚಾರಣೆಗೆ ಒಳಪಡಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಬಳಿಕ ಉಪ ತಹಸೀಲ್ದಾರ್ ಪ್ರಕಾಶ ಬುಳ್ಳಾಗೆ ಮನವಿ ಸಲ್ಲಿಸಲಾಯಿತು.

ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಮಲ್ಲಪ್ಪ ಅಂಕುಶದೊಡ್ಡಿ, ಬಸವಂತರಾಯ ಕುರಿ, ಪ್ರಸನ್ನ ಪಾಟೀಲ್, ಪಂಪಣ್ಣ ಗುಂಡಳ್ಳಿ, ಸಿದ್ದಣ್ಣ ಹೂವಿನಬಾವಿ, ಜಗದೀಶ ತಾತ ಹಾಲಾಪುರ, ಸುಗಣ್ಣ ಬಾಳೆಕಾಯಿ, ನಾಗರಾಜ ಯಂಬಲದ, ಮೌನೇಶ ನಾಯಕ, ವೆಂಕಟೇಶ ಜಿ., ಮಲ್ಲು ಯಾದವ ಇತರರಿದ್ದರು.