ಜಿಲ್ಲೆ

ರೇಬಿಸ್ ರೋಗ ಬಾರದಂತೆ ಮುಂಜಾಗ್ರತೆ ವಹಿಸಿ

ಕುಮಟಾ: ಸರ್ಕಾರ ಸಾರ್ವಜನಿಕರ ಜಾಗೃತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ಜಿ.ಪಂ., ತಾ.ಪಂ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ಇಲ್ಲಿನ ತಾಲೂಕು ಪಶು ಆಸ್ಪತ್ರೆಯಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ರೇಬಿಸ್ ದಿನಾಚರಣೆ ಹಾಗೂ ಕಾಲುಬಾಯಿ ರೋಗದ ನಾಲ್ಕನೇ ಸುತ್ತಿನ ಲಸಿಕಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ರೇಬಿಸ್ ರೋಗದ ಬಗ್ಗೆ ಅರಿತುಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗದಿಂದ ರೈತರಿಗೆ ನಷ್ಟ ಉಂಟಾಗುತ್ತದೆ. ಇದನ್ನು ತಪ್ಪಿಸಲು ಹಾಗೂ ಜಾನುವಾರುಗಳ ಆರೋಗ್ಯ ಕಾಪಾಡಲು ಸರ್ಕಾರ ಉಚಿತವಾಗಿ ಲಸಿಕೆಗಳನ್ನು ನೀಡುತ್ತಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಆಜ್ಞಾ ನಾಯಕ ರೇಬಿಸ್ ರೋಗದ ಬಗ್ಗೆ ಉಪನ್ಯಾಸ ನೀಡಿದರು. ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ವಿಶ್ವನಾಥ ಕೆ. ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾ.ಪಂ. ಇಒ ನಾಗರತ್ನಾ ನಾಯಕ, ಪಶು ವೈದ್ಯ ಡಾ. ಭರತ್ ಕುಮಾರ ಇತರರು ಇದ್ದರು.ಪಶು ವೈದ್ಯ ಡಾ. ಶ್ರೀಕಾಂತ ಭಟ್ ಸ್ವಾಗತಿಸಿದರು.