ಕೂಡ್ಲಿಗಿ ಲೋಕೊಪಯೋಗಿ ಇಲಾಖೆ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಎನ್.ಟಿ.ಶ್ರೀನಿವಾಸ್ ಮಾತನಾಡಿದರು. ಇಇ ದೇವದಾಸ್, ಎಇಇ ಕೆ.ನಾಗನಗೌಡ ಇತರರಿದ್ದರು. 
ಜಿಲ್ಲೆ

ಸಂಚಾರಕ್ಕೆ ಸಮಸ್ಯೆಯಾಗದಂತೆ ಕ್ರಮವಹಿಸಿ

ಗಾಯತ್ರಿ ಮಾಲಿಪಾಟೀಲ್

ಕೂಡ್ಲಿಗಿ: ಕೋಟ್ಯಂತರ ರೂ. ಅನುದಾನ ಒದಗಿಸಿದರೂ ರಸ್ತೆಗಳು ಸುಧಾರಣೆ ಕಾಣುತ್ತಿಲ್ಲ ಅಧಿಕಾರಿಗಳು ಎಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸೂಚಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಮಂಗಳವಾರ ಲೋಕೊಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬಹುತೇಕ ಅನುದಾನವನ್ನು ರಸ್ತೆ ಅಭಿವೃದ್ಧಿಗೆ ನೀಡಿದ್ದು, ರಸ್ತೆಯಲ್ಲಿನ ತಗ್ಗು, ಗುಂಡಿಗಳಿಂದ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾರ್ವಜನಿಕರಿಗೆ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಆದರೆ, ಅಧಿಕಾರಿಗಳು ಸಂಬಂಧವೇ ಇಲ್ಲ ಎನ್ನುವಂತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ರಸ್ತೆ ಅಭಿವೃದ್ಧಿಗೆ ಸೂಕ್ತ ಅನುದಾನ ನೀಡಲು ಸಹಕರಿಸುವೆ. ಮಳೆಗಾಲದಲ್ಲಿ ರಸ್ತೆ ಇಕ್ಕೆಲಗಳಲ್ಲಿ ಗಿಡ-ಮರಗಳು ಬೆಳೆದು ತಿರುವುಗಳಲ್ಲಿ ಎದುರಿಗೆ ಬರುವ ವಾಹನಗಳು ಕಾಣದೆ ಅಪಘಾತಗಳು ಹೆಚ್ಚುತ್ತಿವೆ. ಈ ಬಗ್ಗೆ ದೂರು ಬಂದಿವೆ. ಅಧಿಕಾರಿಗಳು ಮೌನ ಮುರಿದು ಸಮಸ್ಯೆಗಳ ಬಗ್ಗೆ ಚರ್ಚಿಸಿದರೆ ಸಹಕಾರ ನೀಡಲಾಗುವುದು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು. ಲೋಕೋಪಯೋಗಿ ಇಲಾಖೆ ಇಇ ದೇವದಾಸ್, ಎಇಇ ಕೆ.ನಾಗನಗೌಡ ಇತರರಿದ್ದರು.

ನಂತರ ಅರಣ್ಯ ಇಲಾಖೆ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಹಾಗೂ ಪರಿಹಾರಕ್ಕೆ ಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.