ಮಂಜೇಶ್ವರ: ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದಲ್ಲಿ ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಸಂಘ ಮತ್ತು ಅಧ್ಯಯನ ಕೇಂದ್ರ ವತಿಯಿಂದ ಹಿರಿಯರ ನೆನಪು ಮತ್ತು ಯಕ್ಷಗಾನ ತಾಳಮದ್ದಳೆ ಕೂಟ ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕೃಷ್ಣಪ್ಪ ಕಿನ್ಯ ಕಾರ್ಯಕ್ರಮ ಉದ್ಫಾಟಿಸಿದರು. ಇತ್ತೀಚೆಗೆ ಅಗಲಿದ ಸಂಘದ ಸದಸ್ಯ ವೆಂಕಪ್ಪ ಪೂಜಾರಿ ಬಸ್ರಿಮಾರು ಕುರಿತು ನಿಟ್ಟೆ ಕಾಲೇಜಿನ ಗ್ರಂಥಪಾಲಕ ದಾಮೋದರ್ ಶೆಟ್ಟಿ ಕುಂಜತ್ತೂರು ಸ್ಮರಿಸಿದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಚಕ್ರತೀರ್ಥ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸತೀಶ್ ಕುಲಾಲ್ ಉಪಸ್ಥಿತರಿದ್ದರು. ಗಣೇಶ್ ಕುಂಜತ್ತೂರು ಸ್ವಾಗತಿಸಿದರು. ರಮೇಶ್ ಯನ್. ಶೆಟ್ಟಿ ವಂದಿಸಿದರು. ವಿದ್ಯಾಧರ ಶೆಟ್ಟಿ ಕಾರ್ಯಕ್ರಮದ ನಿರೂಪಿಸಿದರು. ಸಭೆ ಬಳಿಕ ಸಂಘದ ಕಲಾವಿದರು ಮತ್ತು ಅತಿಥಿ ಕಲಾವಿದರು ಜತೆಗೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ ಜರುಗಿತು.