ಬ್ಯಾಡಗಿ: ತಾಲೂಕಿನ ಮೋಟೆಬೆನ್ನೂರಿನ ನವೋದಯ ವಿದ್ಯಾ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೊದಲ ಶ್ರೇಣಿಯಲ್ಲಿ ಉತ್ತೀರ್ಣರಾದ 48 ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯವರು ಸೋಮವಾರ ಪ್ರತಿಭಾ ಪುರಸ್ಕಾರ ನೀಡಿದರು.
ಸಂಸ್ಥೆಯ ಅಧ್ಯಕ್ಷ ಬಿ.ಸಿ. ಹಾವೇರಿಮಠ, ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ನಿವೃತ್ತ ಉಪನ್ಯಾಸಕ ಡಾ.ಪ್ರೇಮಾನಂದ ಲಕ್ಕಣ್ಣನವರ, ಅಶೋಕ ಬಣಕಾರ, ವಿಜಯ ಬಳ್ಳಾರಿ, ಮೃತ್ಯುಂಜಯ ಲಕ್ಕಣ್ಣನವರ, ವಿ.ಎಂ. ಕನ್ನಮ್ಮನವರ, ಮುಖ್ಯಶಿಕ್ಷಕ ನಾಗರಾಜ ಹುಚ್ಚಣ್ಣನವರ, ಆರ್.ಆರ್. ಕುಂಠೆ ಇತರರಿದ್ದರು.