ಜಿಲ್ಲೆ

ಶಿಕ್ಷಣ, ಆರೋಗ್ಯಕ್ಕೆ ಸಂಘಟನೆ ಶ್ರಮ : ಮುಹಮ್ಮದ್ ನಝೀರ್ ಅಭಿಪ್ರಾಯ

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ಆರೋಗ್ಯಕ್ಕಾಗಿ ಸರ್ಕಾರದಿಂದ ಹಲವು ಯೋಜನೆಗಳಿದ್ದರೂ ಅದನ್ನು ಪಡೆಯಲು ನಿಯಮಗಳೂ ಇವೆ. ಈಗಾಗಲೇ ಶೈಕ್ಷಣಿಕ ಕ್ಷೇತ್ರದಲ್ಲಿ ಸಮುದಾಯದ ಬೆಳವಣಿಗೆಗೆ ಶ್ರಮಿಸಿರುವ ಸಂಘಟನೆಯಿಂದ ಆರೋಗ್ಯ ಕ್ಷೇತ್ರಕ್ಕೂ ಶಾಶ್ವತ ಪರಿಹಾರ ಒದಗಿಸುವ ಪ್ರಯತ್ನ ನಡೆಯಬೇಕಿದೆ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಮುಹಮ್ಮದ್ ನಝೀರ್ ಅಭಿಪ್ರಾಯಪಟ್ಟರು.

ಜಮೀಯತುಲ್ ಫಲಾಹ್ ಉಳ್ಳಾಲ ತಾಲೂಕು ಘಟಕದಿಂದ ಕಂಕನಾಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಶನಿವಾರ ವಿದ್ಯಾರ್ಥಿವೇತನ ವಿತರಣೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಮತ್ತು ದ.ಕ.ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ. ಮಾತನಾಡಿದರು. ಜಮೀಯತುಲ್ ಫಲಾಹ್ ಉಳ್ಳಾಲ ತಾಲೂಕು ಘಟಕಾಧ್ಯಕ್ಷ ಅಬ್ದುಲ್ ನಾಸೀರ್ ಕೆ.ಕೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಬ್ದುಲ್ ಗಫೂರ್, ಮಂಗಳೂರು ತಾಲೂಕು ಘಟಕಾಧ್ಯಕ್ಷ ಮುಹಮ್ಮದ್ ಬಪ್ಪಳಿಗೆ, ಮಂಗಳೂರು ಎಂ.ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ರಶೀದ್ ವಿಟ್ಲ, ಉಳ್ಳಾಲ ತಾಲೂಕು ಘಟಕ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಕೋಡಿಜಾಲ್ ಮುಖ್ಯ ಅತಿಥಿಗಳಾಗಿದ್ದರು. ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ತಪ್ಷಿಯಾ ನಡುಪದವು, ಜತೆಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್, ಸದಸ್ಯರಾದ ಶೌಕತ್ ಅಲಿ ಕೊಣಾಜೆ, ಹಸನ್ ಕುಂಞಿ ಕೋಡಿಜಾಲ್, ಅಬ್ದುಲ್ ರಹ್ಮಾನ್ ಪಾನೀರ್ ಮೊದಲಾದವರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಕೆಎಂಕೆ ಮಂಜನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಹ್ಮದ್ ಕುಂಞಿ ಮಾಸ್ಟರ್ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಜತೆ ಕಾರ್ಯದರ್ಶಿ ಎ.ಕೆ.ಅಬ್ದುಲ್ ರಹ್ಮಾನ್ ಕೋಡಿಜಾಲ್ ಕಾರ್ಯಕ್ರಮ ನಿರೂಪಿಸಿದರು.