ಕೆ.ಎಂ.ದೊಡ್ಡಿ: ಸಮೀಪದ ಕಾಡುಕೊತ್ತನಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಗುರುವಾರ ಪೊಲೀಸ್ ಠಾಣೆಯ ಬೀಟ್ ಪೊಲೀಸ್ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.
ಹೆಚ್ಚು ಅಂಕ ಪಡೆದ ಕೀರ್ತನಾ, ಸ್ಫೂರ್ತಿ, ಮಮತಾ ಅವರನ್ನು ಸಬ್‌ಇನ್‌ಸ್ಪೆಕ್ಟರ್ ಭೀಮಪ್ಪ ಬಾಣಸಿ ಅಭಿನಂದಿಸಿದರು. ನಂತರ ಮಾತನಾಡಿದ ಅವರು, ಹಳ್ಳಿಗಳಲ್ಲಿ ಓದಿದ ಎಷ್ಟೋ ಮಕ್ಕಳು ಇಂದು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಹಳ್ಳಿಗಾಡಿನ ಸರ್ಕಾರಿ ಶಾಲೆಯಲ್ಲಿ ಓದಿದ ಸರ್ ಎಂ.ವಿಶ್ವೇಶ್ವರಯ್ಯ, ಅಬ್ದುಲ್ ಕಲಾಂ ನಮಗೆ ಮಾದರಿಯಾಗಿದ್ದಾರೆ. ಮಕ್ಕಳಿಗೆ ಓದಿನ ಜತೆಗೆ ಯಾವುದರಲ್ಲಿ ಆಸಕ್ತಿ ಇರುತ್ತದೆಯೋ ಅದರಲ್ಲಿ ಅವರನ್ನು ತೊಡಗಿಸಿ ಎಂದು ಪಾಲಕರಿಗೆ ಕಿವಿ ಮಾತು ಹೇಳಿದರು.
ಸಹಾಯಕ ಸಬ್ ಇನ್‌ಸ್ಪೆಕ್ಟರ್ ವೆಂಕಟೇಶ್, ಸಿಬ್ಬಂದಿ ಸುಬ್ರಹ್ಮಣ್ಯ, ಡಾ.ಹರ್ಷಿತಾ, ಮುಖ್ಯಶಿಕ್ಷಕ ಚಂದ್ರಶೇಖರ್ ಇದ್ದರು.