ಜಿಲ್ಲೆ

ಮಕ್ಕಳ ಪ್ರತಿಭೆ ಗುರುತಿಸಿ ಗೌರವಿಸಿ

ಕವಿತಾಳ: ಪ್ರತಿಯೊಬ್ಬ ಮಗುವಿನಲ್ಲಿ ಪ್ರತಿಭೆಯಿದ್ದು, ಪಾಲಕರು ಹಾಗೂ ಶಿಕ್ಷಕರು ಮಗುವಿನ ಪ್ರತಿಭೆಯನ್ನು ಗುರುತಿಸಿ ಗೌರವಿಸಬೇಕು ಎಂದು ಶಾಸಕ ಹಂಪಯ್ಯನಾಯಕ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿ ಸೋಮವಾರ ಮಾತನಾಡಿದರು. ನಿರ್ಣಯಕರು ಪ್ರತಿಭೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಆಯ್ಕೆಮಾಡಬೇಕು ಎಂದರು. ಬಿಇಒ ಚಂದ್ರಶೇಖರ ದೊಡ್ಡಮನಿ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದರು. ಸಿಆರ್‌ಸಿ ಸೌಮ್ಯ, ಶರಣಬಸವ ಸಾಹುಕಾರ, ಶೇಖರಪ್ಪ ಸಾಹುಕಾರ ಹಟ್ಟಿ ಇತರರಿದ್ದರು.