ಯಲಬುರ್ಗಾ ತಾಲೂಕಿನ ಹಿರೇಅರಳಿಹಳ್ಳಿಯಲ್ಲಿ ವಲಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ರಾಜ್ಯ ಸಮಿತಿ ಸದಸ್ಯ ಶೇಖರಗೌಡ ರಾಮತ್ನಾಳ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ದೇವಮ್ಮ ಭೂತಲ್, ಉಪಾಧ್ಯಕ್ಷೆ ಮಲ್ಲಮ್ಮ ಮನ್ನಾಪುರ, ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕ ಶಿವಪ್ಪ ವಾದಿ, ಎಸ್ಡಿಎಂಸಿ ಅಧ್ಯಕ್ಷ ಶರಣಪ್ಪ ಬಿಂಗಿ, ಕಸಾಪ ತಾಲೂಕು ಅಧ್ಯಕ್ಷ ಬಾಲದಂಡಪ್ಪ ತಳವಾರ್ ಇದ್ದರು. 
ಜಿಲ್ಲೆ

ಪ್ರತಿಭೆ ಅನಾವರಣಕ್ಕೆ ಕಾರಂಜಿ ಉತ್ತಮ ವೇದಿಕೆ

Kopala - Desk - Eraveni

ಯಲಬುರ್ಗಾ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ರಾಜ್ಯ ಸಮಿತಿ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ವಲಯಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಿವೆ ಕಲೋತ್ಸವದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಸುಪ್ತ ಕಲೆ ಅನಾವರಣಕ್ಕೆ ಪ್ರೋತ್ಸಾಹಿಸಬೇಕು ಎಂದರು.

ಸಿಆರ್‌ಪಿ ಹುಸೇನ್‌ಸಾಬ್ ಭಗವಾನ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ವೈ.ಜಿ.ಪಾಟೀಲ್. ವೈ.ಜಿ.ಪಾಟೀಲ್, ಗ್ರಾಪಂ ಅಧ್ಯಕ್ಷೆ ದೇವಮ್ಮ ಭೂತಲ್, ಉಪಾಧ್ಯಕ್ಷೆ ಮಲ್ಲಮ್ಮ ಮನ್ನಾಪುರ, ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕ ಶಿವಪ್ಪವಾದಿ,

ಎಸ್ಡಿಎಂಸಿ ಅಧ್ಯಕ್ಷ ಶರಣಪ್ಪ ಬಿಂಗಿ, ಕಸಾಪ ತಾಲೂಕು ಅಧ್ಯಕ್ಷ ಬಾಲದಂಡಪ್ಪ ತಳವಾರ್, ಗಣ್ಯರಾದ ಸಿದ್ದಲಿಂಗಪ್ಪ ಶ್ಯಾಗೋಟಿ, ಸಂಗಮೇಶ ತೋಟದ, ಮೆಹಬೂಬ್, ಕನಕಪ್ಪ ಕಂಬಳಿ, ವೆಂಕಟೇಶಗೌಡ ಪಾಟೀಲ್, ಶರಣಪ್ಪ ಹಳ್ಳಿಗುಡಿ, ಮಹಾಂತೇಶ ವಾದಿ, ತೀರ್ಥಪ್ಪ ಭಜಂತ್ರಿ, ಲಕ್ಷ್ಮೀದೇವಿ ಮನ್ನಾಪುರ, ಮುಖ್ಯಶಿಕ್ಷಕ ಶಿವಲಿಂಗಪ್ಪ ಮಂಗಳೂರು ಇದ್ದರು.