ಜಿಲ್ಲೆ

ಕಾರ್ಯಕರ್ತೆ ವಿರುದ್ಧ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ: ಮತಕ್ಷೇತ್ರದ ತಾಳಿಕೋಟೆ ತಾಲೂಕಿನ ಮಸ್ಕನಾಳ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಸಿದ್ದಮ್ಮ ನಾಗೂರಮೇಟಿ ಬೇಜವಾಬ್ದಾರಿಯಿಂದ ಸೇವೆ ಸಲ್ಲಿಸುತ್ತಿದ್ದು, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಬುಧವಾರ ಶಿಶು ಅಭಿವೃಧಿ ಯೋಜನಾಧಿಕಾರಿ ಸಾವಿತ್ರಿ ಗುಗ್ಗರಿ ಅವರಿಗೆ ಮನವಿ ಸಲ್ಲಿಸಿದರು.
ಮಕ್ಕಳಿಗೆ ಸರಿಯಾಗಿ ಪೌಷ್ಠಿಕ ಆಹಾರ ಪೂರೈಕೆ ಮಾಡುವುದಿಲ್ಲ. ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಕೊಡಬೇಕಾದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರುತ್ತಾರೆ. ಈ ಕುರಿತು ಮೇ 26 ರಂದು ತಾಳಿಕೋಟೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದರು.
ಮನವಿ ಸ್ವೀಕರಿಸಿದ ಸಿಡಿಪಿಒ ಸಾವಿತ್ರಿ ಗುಗ್ಗರಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಗ್ರಾಮದ ಮಹಿಳೆಯರು, ಬಹುಜನ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಇದ್ದರು.