ಸಿಂಧನೂರಿನ ಜ್ಞಾನಜ್ಯೋತಿ ಕಾಲೇಜಿನಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಉದ್ಘಾಟಿಸಿದರು. ಎರಡನೆ ಹೆಚ್ಚುವರಿ ನ್ಯಾಯಾಧೀಶ ಆಚಪ್ಪ ದೊಡ್ಡಬಸವರಾಜ, ಎರಡನೆಯ ಹೆಚ್ಚುವರಿ ನ್ಯಾಯಾಧೀಶ ಆಚಪ್ಪ ದೊಡ್ಡಬಸವರಾಜ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಶಿವಕುಮಾರ ಉಮಲೂಟಿ, ಖಜಾಂಚಿ ಶರಣಬಸವ ಉಮಲೂಟಿ, ಪ್ರಾಚಾರ್ಯ ವಿಷ್ಣುವರ್ಧನರಡ್ಡಿ, ವಕೀಲ ಎಸ್.ಎಸ್.ಹಿರರೇಮಠ ಇದ್ದರು. 
ಜಿಲ್ಲೆ

ಪ್ರತಿಯೊಬ್ಬರಿಗೂ ಕಾನೂನು ಜ್ಞಾನ ಅಗತ್ಯ

ಸಿಂಧನೂರು: ವಿದ್ಯಾರ್ಥಿಗಳು ಮೊಬೈಲ್ ಗೀಳು ಬೆಳೆಸಿಕೊಳ್ಳದೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಕೊಡಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ ಹೇಳಿದರು.

ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಿ

ನಗರದ ಜ್ಞಾನಜ್ಯೋತಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಶುಕ್ರವಾರ ಮಾತನಾಡಿದರು.

ಭವಿಷ್ಯದ ಜೀವನ ಉಜ್ವಲಗೊಳ್ಳಬೇಕಾದರೆ, ಉತ್ತಮ ಫಲಿತಾಂಶ ಪಡೆದುಕೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಪರೀಕ್ಷೆ ದೃಷ್ಟಿಯಿಂದ ಓದದೆ, ನಿತ್ಯ ಓದಿನಲ್ಲಿ ತೊಡಗಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಕಾನೂನಿನ ಕನಿಷ್ಠ ಜ್ಞಾನ ಇರಬೇಕು. ಯಾವುದೇ ಸಮಸ್ಯೆ ಬಂದಲ್ಲಿ ನ್ಯಾಯಾಲಯದಲ್ಲಿನ ಕಾನೂನು ಸೇವಾ ಸಮಿತಿ ಸಂಪರ್ಕಿಸಬೇಕು ಎಂದರು. ದೌರ್ಜನ್ಯಗಳ ಕುರಿತು ವಕೀಲ ಎಸ್.ಎಚ್.ಪಿ.ಖಾದ್ರಿ ವಿಶೇಷ ಉಪನ್ಯಾಸ ನೀಡಿದರು.