ಜಿಲ್ಲೆ

ದೇಶದ ಮೌಲ್ಯ ಗೌರವಿಸುವ ಸಂಕಲ್ಪ -  ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಕರೆ

Mangaluru - Nishantha Narayana

ಪುತ್ತೂರು: ಆಚರಣೆ ಜತೆಗೆ ದೇಶದ ಮೌಲ್ಯಗಳನ್ನು ಗೌರವಿಸುವ ಸಂಕಲ್ಪ ಮಾಡಬೇಕು. ಸ್ವಾತಂತ್ರ್ಯ ವೀರರ ತ್ಯಾಗ ಹೋರಾಟದ ಪ್ರತೀಕವಾಗಿದ್ದು, ಅವರ ಆದರ್ಶಗಳನ್ನು ಪಾಲಿಸುವ ಕಾರ್ಯವಾಗಬೇಕು ಎಂದು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಕರೆ ನೀಡಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಸ್ವಾತಂತ್ರ್ಯೋತ್ಸವ ಅಂಗವಾಗಿ ಎನ್.ಎಸ್.ಕಿಲ್ಲೆ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶೈಕ್ಷಣಿಕ ಸಾಧಕರನ್ನು ಗೌರವಿಸಲಾಯಿತು. ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಪೊಲೀಸ್ ಇಲಾಖೆಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಪುಡಾ ಅಧ್ಯಕ್ಷ ಅಮಲ ರಾಮಚಂದ್ರ, ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಪುತ್ತೂರು ತಹಸೀಲ್ದಾರ್ ಎಸ್.ಬಿ.ಕೂಡಲಗಿ, ತಾಪಂ ಇಒ ನವೀನ್ ಕುಮಾರ್ ಭಂಡಾರಿ, ಪೌರಾಯುಕ್ತೆ ವಿದ್ಯಾ ಎಸ್. ಕಾಳೆ ಮತ್ತಿತರರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ವಂದಿಸಿದರು. ಶಿಕ್ಷಕ ಬಾಲಕೃಷ್ಣ ಪೊರ್ಡಾಳ್ ಕಾರ್ಯಕ್ರಮ ನಿರೂಪಿಸಿದರು.

ದೇಶ ಏಕತೆ, ಅಖಂಡತೆ ಕಾಯ್ದುಕೊಳ್ಳುವ ಕಾರ್ಯವಾಗಬೇಕು. ದೇಶದ ನಾಗರಿಕರೆಲ್ಲರೂ ಸಮಾನರು ಎನ್ನುವುದನ್ನು ಆಚರಣೆಗೆ ತರಬೇಕು. ಪ್ರಜಾಪ್ರಭುತ್ವದ ಹಕ್ಕುಗಳನ್ನು ಸರಿಯಾದ ರೀತಿ ಆಚರಣೆಗೆ ತರಬೇಕು. ಯುವಪೀಳಿಗೆ ಸರಿಯಾದ ಮಾರ್ಗದರ್ಶನ ನೀಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ.

| ಅಮಳರಾಮಚಂದ್ರ ಪುಡಾ ಅಧ್ಯಕ್ಷ