ಬಂಟ್ವಾಳ: ದ.ಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಸೇಂಟ್ ಜೋಕಬ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಫರ್ಲಾ ಆಶ್ರಯದಲ್ಲಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ತಾಲೂಕುಮಟ್ಟದ ಚದುರಂಗ ಸ್ಪರ್ಧೆ ಫರ್ಲಾ ಶಾಲೆಯಲ್ಲಿ ಬುಧವಾರ ನಡೆಯಿತು.
ಫರ್ಲಾ ಚರ್ಚ್‌ನ ಧರ್ಮಗುರು ಮಾರ್ಕ್ ಅರುಣ್ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಇಂದು ಸ್ವಲ್ಪ ಕಷ್ಟಪಟ್ಟರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಹಾಗೂ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ ಸ್ಪರ್ಧೆಗೆ ಚಾಲನೆ ನೀಡಿದರು.
ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಉಮಾನಾಥ ಕಾಪು, ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವಾಧ್ಯಕ್ಷೆ ಸುಕನ್ಯಾ ರತ್ನ, ಜಿಪಿಟಿ ಅಧ್ಯಕ್ಷ ಗುರುರಾಜ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ರೈ ತುಂಬೆ, ತಾಲೂಕು ಸಂಘದ ಕೋಶಾಧಿಕಾರಿ ವಿನೋದಾ, ಶಾಲಾ ಮುಖ್ಯ ಶಿಕ್ಷಕ ವೈ.ಎಫ್.ಕಾಲಾವಾಡ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಪ್ರಸಾದ್ ರೈ ಸ್ವಾಗತಿಸಿದರು. ವಾಮದಪದವು ವಲಯ ನೋಡಲ್ ಚಿನ್ನಪ್ಪ ಶಂಭೂರು ವಂದಿಸಿದರು. ಜನಾರ್ದನ ಆಚಾರ್ಯ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.