ಚಿಕ್ಕಮಗಳೂರು: ತಾಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಂಘ-ಸAಸ್ಥೆಗಳ ಹಾಗೂ ಸಾಹಿತ್ಯಾಸಕ್ತರ ನೆರವಿನಿಂದ ಸೆ. ೨೮ ಮತ್ತು ೨೯ ರಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ಅತ್ಯಂತ ವಿಜೃಂಭಣೆಯಿAದ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಸಕ ಹಾಗೂ ಸಮ್ಮೇಳನ ಗೌರವಾಧ್ಯಕ್ಷ ಎಚ್.ಡಿ.ತಮ್ಮಯ್ಯ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಕುರಿತು ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಶನಿವಾರ ಮಾತನಾಡಿದ ಅವರು, ಸಾಹಿತ್ಯಪ್ರೇಮ, ಯುವಪ್ರತಿಭೆಗಳನ್ನು ಮುಂಚೂಣಿಗೆ ತರುವ ನಿಟ್ಟಿನಲ್ಲಿ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಮೊದಲು ಆ. ೩೧ರಂದು ನಿಗಧಿಗೊಂಡಿದ್ದ ದಿನಾಂಕವನ್ನು ಸಮಯಾವಕಾಶದ ಅಭಾವದ ಕಾರಣ ಸೆ. ೨೮, ೨೯ರಂದು ಎರಡು ದಿನಗಳ ಕಾಲ ಹಮ್ಮಿಕೊಳ್ಳಲು ಸಭೆ ನಿರ್ಣಯಿಸಿದೆ. ಅಂದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೆರವೇರಿಸಲಿದ್ದಾರೆ. ಜೊತೆಗೆ ಜಿಲ್ಲೆಯ ಜನ ಪ್ರತಿನಿಧಿಗಳು, ಕನ್ನಡಪರ ಸಂಘಟನೆ ಹಾಗೂ ಸಂಘ-ಸAಸ್ಥೆಗಳನ್ನು ಜೋಡಿಸಿ ಸಮ್ಮೇಳನವನ್ನು ಯಶಸ್ವಿಯಾ ಗಿ ಪೂರೈಸುತ್ತೇವೆ ಎಂದು ಹೇಳಿದರು.
ಪ್ರಸ್ತುತ ತಾಲೂಕು ಸಮ್ಮೇಳನ ೧೩ ವರ್ಷಗಳ ನಂತರ ಇದೀಗ ಆಯೋಜನೆಗೊಂಡಿದೆ. ಅಂದಿನ ಕಾರ್ಯಕ್ರಮದಲ್ಲಿ ಸಾಹಿತ್ಯ ಚಟುವಟಿಕೆ, ಚುಟುಕು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಉಪನ್ಯಾಸ ಹಾಗೂ ಹೆಸರಾಂತ ಸಾಹಿತಿಗಳನ್ನು ಆಹ್ವಾನಿಸಿ ಎರಡು ದಿನಗಳ ಕಾಲ ಸಾಹಿತ್ಯದ ಕಂಪನ್ನು ಜನತೆಗೆ ಮುಟ್ಟಿ ಸುವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದರು.
ಕಸಾಪ ಸ್ವಾಗತ ಸಮಿತಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ಸಮ್ಮೇಳನ ಅದ್ಧೂರಿಯಾಗಿ ಹಮ್ಮಿ ಕೊಳ್ಳುವ ದೃಷ್ಟಿಯಿಂದ ಕ್ಷೇತ್ರದ ಶಾಸಕ ಎಚ್.ಡಿ.ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಅವರು ಸಂಪೂರ್ಣ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಸಮ್ಮೇಳನ ಸರಾಗವಾಗಿ ನಡೆಯುವ ದೃಷ್ಟಿಯಿಂದ ಕ್ಷೇತ್ರದ ಶಾಸಕರು ಅನೇಕ ಚರ್ಚೆಗಳ ಬಳಿಕ ಅಂತಿಮಾಗಿ ದಿನಾಂಕ ನಿಗಧಿಯಾಗಿದೆ. ಸೆ. ೨೮ರಂದು ಸಂಜೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಅಂದು ಸಾಹಿತ್ಯಾನವನ, ಜಾನಪದ, ಗಮಕ, ಕವಿಗೋಷ್ಠಿ ಹಾಗೂ ಬಹಿರಂಗ ಸಮಾರಂಭ ನಡೆಯಲಿದೆ ಎಂದರು.
ತಾಲೂಕಿನಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರಿಗೆ ಕನ್ನಡಶ್ರೀ, ಸಾಹಿತ್ಯಶ್ರೀ ಪ್ರಶಸ್ತಿ ನೀಡಲಾಗುವುದು ಹಾಗೂ ಉಳಿದಂತೆ ಕಲೆ, ಸಂಗೀತ ಕ್ಷೇತ್ರದಲ್ಲಿ ಸೇವೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.
ತಾಲೂಕು ಕಸಾಪ ಅಧ್ಯಕ್ಷ ಬಿಸಲೇನಹಳ್ಳಿ ಸೋಮಶೇಖರ ಮಾತನಾಡಿ, ಎರಡನೇ ದಿನವಾದ ಸೆ. ೨೯ರಂದು ಗೌರಿಬಿದನೂರಿನ ಪ್ರಾಚಾರ್ಯ ರಮೇಶಚಂದ್ರದತ್ತ ಸಮಾರೋಪ ಸಮಾರಂಭ ನುಡಿಗಳನ್ನಾಡಲಿದ್ದಾರೆ. ಸಮ್ಮೇಳನಾಧ್ಯಕ್ಷರಾಗಿ ಬೆಳವಾಡಿ ಮಂಜುನಾಥ್ ಆಯ್ಕೆಯಾಗಿದ್ದಾರೆ ಎಂದರು.
ಸಭೆಯಲ್ಲಿ ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ, ಕಾರ್ಯದರ್ಶಿ ಬಿ.ಆರ್.ಜಗದೀಶ್, ಸ್ವಾಗತ ಸಮಿತಿ ಕೋಶಾಧ್ಯಕ್ಷ ಎಚ್.ಸಿ.ನಟರಾಜ್, ಕಸಾಪ ಹೋಬಳಿ ಅಧ್ಯಕ್ಷೆ ವೀಣಾ ಮಲ್ಲಿಕಾರ್ಜುನ್, ಲಕ್ಯಾ ಅಧ್ಯಕ್ಷ ಶಿವನಂಜೇಗೌಡ, ಕಾರ್ಯದರ್ಶಿ ಹಿರೇಗೌಜ ಶಿವು, ಖಾಂಡ್ಯ ಅಧ್ಯಕ್ಷ ರಾಜಪ್ಪಗೌಡ, ಕನ್ನಡಸೇನೆ ಜಿಲ್ಲಾ ವಕ್ತಾರ ಹುಣಸೇಮಕ್ಕಿ ಲಕ್ಷö್ಮಣ್, ಮುಖಂಡರಾದ ಅನ್ವರ್, ವಿ.ಕೆ.ರಘು ಮತ್ತಿತರರಿದ್ದರು.