ಕಾರ್ಕಳ: ಉಡುಪಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಕಾರ್ಕಳ ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟ ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ ಆತಿಥ್ಯದಲ್ಲಿ ಇತ್ತೀಚೆಗೆ ನಡೆಯಿತು.
ಬಾಲಕರ ವಿಭಾಗದಲ್ಲಿ ಹಿರಿಯಂಗಡಿ ಎಸ್‌ಎನ್‌ವಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ, ಕಾರ್ಕಳ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ, ಬಾಲಕಿಯರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳ ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜು ಪ್ರಥಮ, ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಪ್ರಥಮ ಸ್ಥಾನ ಪಡೆದಿರುವ ಕಾರ್ಕಳ ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ, ಹಿರಿಯಂಗಡಿ ಎಸ್‌ಎನ್‌ವಿ ಪದವಿಪೂರ್ವ ಕಾಲೇಜು ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.