ರಾಯಚೂರು ಬೇಸಿಗೆಯಲ್ಲಿ ಗ್ರಾಮೀಣ ಭಾಗಕ್ಕೆ ನೀರೊದಗಿಸುವುದು ದೊಡ್ಡ ಸವಾಲಾಗಿದ್ದು, ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆಯಾಗದಂತೆ ಅಽಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ತಾಲೂಕು ಮಟ್ಟದ ತ್ರೆÊಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಯಚೂರು ತಾಲೂಕಿನಲ್ಲಿ ಒಟ್ಟು ೫೨ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವ ಸಾಧ್ಯತೆಯಿದ್ದು, ಗ್ರಾಮಗಳಿಗೆ ಭೇಟಿ ಸ್ಥಳ ಪರಿಶೀಲನೆ ಮಾಡಿ, ಸಮಸ್ಯೆಗಳನ್ನು ಹಾಗೂ ಸಮಸ್ಯೆಗಳಿರುವ ಗ್ರಾಮಗಳನ್ನು ಪಟ್ಟಿ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಪ್ರತಿಯೊಂದು ಗ್ರಾಮ ಪಂಚಾಯತಿಯ ೧೫ನೇ ಹಣಕಾಸಿನ ಅನುದಾನದಲ್ಲಿ ಶೇ.೩೦ ರಷ್ಟು ಅನುದಾನ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಮೀಸಲಿರಸಲಾಗಿರುತ್ತದೆ. ಕುಡಿಯುವ ನೀರಿನ ಕೊರತೆಯನ್ನು ನೀಗಿಸುವ ಅತ್ಯಂತ ಮಹತ್ವದ ಸಭೆ ಇದಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳನ್ನು ಪಟ್ಟಿ ಮಾಡಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂ ಓವರ್ ಹೆಡ್ ವಾಟರ್ ಟ್ಯಾಂಕ್‌ಗಳಿAದ ನೀರನ್ನು ಒದಗಿಸಲು ಆಗದೇ ಇದ್ದಲ್ಲಿ. ಅಂತಹ ಗ್ರಾಮಗಳಲ್ಲಿ ಟ್ಯಾಂಕರ್‌ಗಳು ಹಾಗೂ ಬಾಡಿಗೆ ಬೋರ್ ವೆಲ್‌ಗಳಿಂದ ನೀರೊದಗಿಸಬೇಕು ಎಂದರು.
ತಾಲೂಕಿನ ಹಲವು ಗ್ರಾಮಗಳಲ್ಲಿ ವಾಟರ್ ಟ್ಯಾಂಕ್‌ಗಳನ್ನು ನಿರ್ಮಾಣ ಮಾಡಲು ವಿಳಂಬ ಮಾಡಲಾಗುತ್ತಿದ್ದು, ಟ್ಯಾಂಕರ್ ನಿರ್ಮಾಣಕ್ಕೆ ಇರುವ ಜಾಗದ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಬೇಕು. ಆಯಾ ಗ್ರಾ.ಪಂ ಪಿಡಿಓಗಳು ಸ್ಥಳಕ್ಕೆ ತೆರಳಿ ಟ್ಯಾಂಕ್‌ಗಳನ್ನು ಕಟ್ಟಿಸಲು ಇರುವ ಸಮಸ್ಯೆಗಳನ್ನು ನಿವಾರಿಸಲು ಮುಂದಾಗಬೇಕು. ಟ್ಯಾಂಕ್ ನಿರ್ಮಾಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿಯೇ ಟ್ಯಾಂಕ್ ನಿರ್ಮಾಣ ಮಾಡಬೇಕು ಮತ್ತು ಟ್ಯಾಂಕ್‌ಗಳಿಗೆ ನೀರನ್ನು ತುಂಬಿಸಿ ಗ್ರಾಮಗಳಲ್ಲಿ ನೀರು ಸರಬರಾಜು ಮಾಡಲು ಮುಂದಾಗಬೇಕು ಎಂದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಽಕಾರಿಗಳು ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆಯ ಅಽಕಾರಿಗಳೊಂದಿಗೆ ಸಮನ್ವಯ ಸಾಽಸಿ ಕಾರ್ಯ ಪ್ರವೃತ್ತರಾಗುವಂತೆ ಸೂಚಿಸಿದರು. ಒಟ್ಟು ೮ ವಲಯ ಸಮತೋಲನಾ ಟ್ಯಾಂಕ್(ಝಡ್‌ಬಿಟಿ)ಗಳ ಗುರಿಯಿದ್ದು, ೨ ಟ್ಯಾಂಕ್‌ಗಳನ್ನು ಪೂರ್ಣಗೊಳಿಸಲಾಗಿದೆ. ಉಳಿದ ಆರು ಟ್ಯಾಂಕ್‌ಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಆರ್‌ಎಪಿಎಂಪಿಸಿಎಸ್ ಅಧ್ಯಕ್ಷ ಜಯಂತರಾವ್ ಪತಂಗೆ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪವನ್ ಕಿಶೋರ ಪಾಟೀಲ್, ನಾಮನಿರ್ದೇಶಿತ ಸದಸ್ಯರಾದ ಪಲ್ಲವಿ, ಈರೇಶ, ತಿಮ್ಮಪ್ಪ ನಾಯಕ, -Áರುಕ್ ಹುಸೇನ್, ಶರಣಬಸವ, ತಹಸೀಲ್ದಾರ್ ಸುರೇಶ ವರ್ಮಾ, ತಾಪಂ ಇಓ ಚಂದ್ರಶೇಖರ ಪವಾರ್ ಸೇರಿದಂತೆ ಅನೇಕರು ಇದ್ದರು.