ಬೆಳ್ತಂಗಡಿ: ಇಂದು ದ.ಕ ಭಾಗದಲ್ಲಿ ಕ್ಯಾನ್ಸರ್‌ನಂತಹ ಕಾಯಿಲೆ ಹೆಚ್ಚಾಗುತ್ತಿದ್ದು ಇದಕ್ಕೆ ತರಕಾರಿ ಬೆಳೆಗೂ ವಿಷಕಾರಿ ಅಂಶ ಬಳಕೆ ಕಾರಣ. ಮುಂದಿನ ದಿನದಲ್ಲಿ ಎಲ್ಲ ಸರ್ಕಾರಿ ಶಾಲೆಯಲ್ಲಿ ಸಾವಯವ ತರಕಾರಿ ಬೆಳೆಸುವ ಮೂಲಕ ಶಿಕ್ಷಕರು ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಬೆಳ್ತಂಗಡಿ ತಾಲೂಕುಮಟ್ಟದ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಗುರುವಾರ ಬೆಳ್ತಂಗಡಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಬೆಳ್ತಂಗಡಿ ಪಪಂ ಅಧ್ಯಕ್ಷ ಜಯಾನಂದ ಗೌಡ, ತಾಪಂ ಆಡಳಿತಾಧಿಕಾರಿ ಜ್ಞಾನೇಶ್ ಎಂ.ಪಿ, ನಪಂ ಮುಖ್ಯಾಧಿಕಾರಿ ರಾಜೇಶ್, ಶಿಕ್ಷಣ ಇಲಾಖೆಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ಸೌಮ್ಯ ಮತ್ತು ಶಿಕ್ಷಕ ಧನಂಜಯ ನಿರೂಪಿಸಿದರು. ಬೆಳ್ತಂಗಡಿ ತಾಪಂ ಕಾರ್ಯನಿರ್ವಹಣಾಧಿಕಾರಿ ಬೆಳ್ತಂಗಡಿ ತಾಲೂಕು ಶಿಕ್ಷಕ ದಿನಾಚರಣೆ ಸಮಿತಿ ಅಧ್ಯಕ್ಷ ಭವಾನಿ ಶಂಕರ್ ಸ್ವಾಗತಿಸಿದರು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಮೋಹನ್ ಕುಮಾರ್ ಮತ್ತು ಪುಷ್ಪಾ ಸಂದೇಶ ವಾಚಿಸಿದರು. ನಿವೃತ್ತ ಶಿಕ್ಷಕರ ಪರವಾಗಿ ಚೊಕ್ಕಾಡಿ ರಾಮಕೃಷ್ಣ ಭಟ್ ಮತ್ತು ಶಿಕ್ಷಕಿ ಎನ್.ಜೆ.ಮೇರಿ ಅನಿಸಿಕೆ ವ್ಯಕ್ತಪಡಿಸಿದರು.
ಶಿಕ್ಷಕರಾದ ವೆಂಕಟೇಶ್ ತುಳಪುಳೆ, ರಾಧಾಕೃಷ್ಣ ತಚ್ಛಮೆ, ಜಗದೀಶ್, ಮಹೇಂದ್ರ ಪೂಜಾರಿ, ಜ್ಯೋತಿ, ಅಖಿಲ್, ಮಂಗಳಾ, ನಿರಂಜನ್, ಶುಭಾ ಕೆ, ಸುಜಯಾ ಬಿ. ಕಾರ್ಯಕ್ರಮ ನಿರೂಪಿಸಿದರು. ಚೇತನಾಕ್ಷಿ ವಂದಿಸಿದರು.
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಕೊಯ್ಯೂರು ಪ್ರೌಢಶಾಲಾ ಮುಖ್ಯಶಿಕ್ಷಕ ರಾಧಾಕೃಷ್ಣ ತಚ್ಚಮೆ ಹಾಗೂ ಬಂಗಾಡಿ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಮಿತಾನಂದ ಹೆಗ್ಡೆ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಮುಖ್ಯಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ, ಬಂದಾರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್, ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಕಲ್ಲೇಶಪ್ಪ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ಗೌರವಿಸಲಾಯಿತು.