ಬೆಳ್ತಂಗಡಿ: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ ನಡೆಯಿತು.
ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಂ.ಶೆಟ್ಟಿ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು. ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ.ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು.
ಕ್ರೀಡಾಕೂಟಕ್ಕೆ ಯಶಸ್ವಿಗೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.
ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಯರಾಜ್ ಜೈನ್, ತಾಲೂಕು ಎಸ್‌ಡಿಎಂಸಿ ಸಮನ್ವಯ ವೇದಿಕೆ ಅಧ್ಯಕ್ಷ ರಮೇಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2 ಅಧ್ಯಕ್ಷ ರವಿರಾಜ್ ಕೊರಂಜ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್ 2 ಅಧ್ಯಕ್ಷ ಅಖಿಲ್ ಕುಮಾರ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಾಥ್ ಬಂಗೇರ, ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ, ಪುಂಜಾಲಕಟ್ಟೆ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಚೇತನ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ನಿರಂಜನ್, ತಾಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷರು, ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷರಾದ ಲಾವಣ್ಯ ಶೆಟ್ಟಿ ಅವರು ಹಾಗೂ ಕುವೆಟ್ಟು ಶಾಲಾ ಮುಖ್ಯಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣಶಿಕ್ಷಕಿ ಪೂರ್ಣಿಮಾ ನಿರೂಪಿಸಿದರು.