ಹುಬ್ಬಳ್ಳಿ : ಬರಗಾಲ ಘೋಷಣೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಕೆಲ ತಾಲೂಕುಗಳನ್ನು ಬರಗಾಲ ಪೀಡಿತವೆಂದು ಶೀಘ್ರದಲ್ಲಿಯೇ ಘೋಷಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರಗಾಲ ಪೀಡಿತ ತಾಲೂಕುಗಳ ವರದಿಯನ್ನು ಕೇಂದ್ರ ಸರ್ಕಾರಕ್ಕೂ ಕಳುಹಿಸಲಾಗುವುದು ಎಂದರು.
ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ. ಬೇರೆಯವರು ವಿಶ್ಲೇಷಣೆ ಮಾಡಿದ್ದಕ್ಕೆಲ್ಲ ಉತ್ತರಿಸಲು ಆಗುವುದಿಲ್ಲ ಎಂದು ತಿಳಿಸಿದರು.
ಬಿಜೆಪಿಯವರಿಗೆ ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.