ಜಿಲ್ಲೆ

ಸುರತ್ಕಲ್‌ನಲ್ಲಿ ಯುವಕನ ಮೇಲೆ ತಲವಾರು ದಾಳಿ

Dakshina Kannada

ಮಂಗಳೂರು: ಸುರತ್ಕಲ್‌ನಲ್ಲಿ ಗುರುವಾರ ರಾತ್ರಿ ಅಂಗಡಿಯೊಂದರ ಮುಂದೆ ನಿಂತಿದ್ದ ಯುವಕನ ಮೇಲೆ ತಲವಾರು ದಾಳಿಯಾಗಿದ್ದು , ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಸುರತ್ಕಲ್ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಜಿಲ್ ಎಂಬಾತ ಗುರುವಾರ ರಾತ್ರಿ ಚಪ್ಪಲ ಖರೀದಿಗಾಗಿ ಬಂದಿದ್ದನೆನ್ನಲಾಗಿದ್ದು, ಚಪ್ಪಲಿ ಅಂಗಡಿ ಎದುರು ನಿಂತಿದ್ದಾಗ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.