???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಶೀಘ್ರ

ಜಗಳೂರು: ಮನೆ ಕಳೆದುಕೊಂಡ 29 ಫಲಾನುಭವಿಗಳಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಾಪಂ ಇಒ ಕೆಂಚಪ್ಪ ಹೇಳಿದರು.

ತಾಲೂಕಿನ ಹಿರೇಮಲ್ಲನಹೊಳೆ ಗ್ರಾಪಂನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮಸಭೆಯಲ್ಲಿ ಮಾತನಾಡಿ, ಗ್ರಾಮದಲ್ಲಿ ನಿವೇಶನದ ಕೊರತೆಯಿಂದ 30ಕ್ಕೂ ಹೆಚ್ಚು ಕುಟುಂಬಗಳು ಕೆರೆ ಸಮೀಪ ಮನೆ, ಗುಡಿಸಲು ಕಟ್ಟಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ಕಳೆದ ಬಾರಿ ಸುರಿದ ಭಾರಿ ಮಳೆಯಿಂದ ಕೆರೆ ಭರ್ತಿಯಾಗಿ ಮನೆಗಳು ಮುಳುಗಿ ಜಲಾವೃತಗೊಂಡಿದ್ದವು ಎಂದರು.

ಸಂತ್ರಸ್ತ ಕುಟುಂಬಗಳಿಗೆ ಗಂಜಿ ಕೇಂದ್ರ ತೆರೆದು ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ವ್ಯಾಪ್ತಿಯಲ್ಲಿನ ದ್ವಾರಕನಗರ ಸಮೀಪ ನಾಲ್ಕು ಎಕರೆ ಜಮೀನಿನಲ್ಲಿ ಕಂದಾಯ ಇಲಾಖೆ ನೆರೆ ಸಂತ್ರಸ್ತರಿಗೆ ನಿವೇಶನ ಕಲ್ಪಿಸಲು 2 ಎಕರೆ ಜಮೀನು ಮಂಜೂರು ಮಾಡಿದ್ದು, ಸೂಕ್ತ ಫಲಾನುಭವಿಗಳಿಗೆ ನಿವೇಶನ ನೀಡಲು ಗ್ರಾಮ ಸಭೆ ಮೂಲಕ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಮಾಡಲಾಗಿದೆ ಎಂದು ತಿಳಿಸಿದರು.

ಶಾಸಕ ಬಿ.ದೇವೆಂದ್ರಪ್ಪ ಕಾಳಜಿಯಿಂದ ಗ್ರಾಮಕ್ಕೆ ಭೇಟಿ ನೀಡಿ ನಿವೇಶನ ನೀಡುವುದಾಗಿ ಭರವಸೆ ನೀಡಿದ್ದರು. ಅವರ ಆದೇಶದಂತೆ ಹೊರವಲಯದ ಸರ್ಕಾರಿ ಜಾಗದಲ್ಲಿ ನಿವೇಶನ ಗುರುತಿಸಿ ಮಂಜೂರು ಮಾಡಲಾಗಿದೆ. ತಿಂಗಳೊಳಗೆ ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಾಗುವುದು ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿ ಅನಿರುದ್ಧ್ ಮಾತನಾಡಿ, ಗ್ರಾಮದ 34 ಅರ್ಜಿಗಳನ್ನು ಗ್ರಾಮ ಸಭೆಯಲ್ಲಿ ಪರಿಶೀಲಿಸಲಾಗಿದೆ. ಅದರಲ್ಲಿ 29 ಅರ್ಜಿಗಳ ದಾಖಲಾತಿ, ಫಲಾನುಭವಿ ಹೆಸರು ಸೂಕ್ತವಾಗಿದೆ. ಗ್ರಾಮ ವ್ಯಾಪ್ತಿಯಲ್ಲಿ ಇನ್ನು ಅನೇಕ ನಿವೇಶನ ರಹಿತರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಮೊದಲ ಆದ್ಯತೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೀಡಲಾಗಿದೆ. ನಿವೇಶನಕ್ಕೆ ಅರ್ಜಿ ಸಲ್ಲಿಸಿದವರಿಗೆ ತಾಲೂಕು ಆಡಳಿತಕ್ಕೆ ಕಡತ ಸಲ್ಲಿಸುತ್ತೇವೆ ಎಂದರು.

ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಸುರೇಶ್, ಮಹಾಂತೇಶ್, ರಜಿಯಾಬಿ ಖಲೀಲ್, ಈರಮ್ಮ, ಶಿವಣ್ಣ, ದಲಿತ ಸಂಘರ್ಷ ಸಮಿತಿ ಮುಖಂಡ ಹನುಮಂತಪ್ಪ, ಧನ್ಯಕುಮಾರ್, ಕುಬೇಂದ್ರಪ್ಪ ಇತರರಿದ್ದರು.