ಕೊಪ್ಪಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ 30 ದಿನಗಳ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ತರಬೇತಿ ಮತ್ತು ಮೊಬೈಲ್ ರಿಪೇರಿ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅರ್ಜಿದಾರರಿಗೆ ಜುಲೈ 30 ರಂದು ಸಂದರ್ಶನ ನಡೆಯಲಿದ್ದು, ಆಗಸ್ಟ್ 1 ರಿಂದ ತರಬೇತಿ ಪ್ರಾರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಫಿದೊಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.
ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08539-231038, 9483618178, 9481085217, 7259073827 ಗೆ ಸಂಪರ್ಕಿಸಬಹುದು ಎಂದು ಆರ್ಸೆಟಿ ನಿರ್ದೇಶಕರು ತಿಳಿಸಿದ್ದಾರೆ.