ರಾಜ್ಯಾಧ್ಯಕ್ಷ ರೇವಣ್ಣ ಅವರನ್ನು ಕುಕ್ಕೆ ದೇವಳದ ವತಿಯಿಂದ ಸ್ವಾಗತಿಸಲಾಯಿತು. ಪ್ರಮುಖರಾದ ಭರತ್ ಮುಂಡೋಡಿ, ಸುಧೀರ್ ಕುಮಾರ್ ಶೆಟ್ಟಿ, ಹರೀಶ್ ಎಸ್.ಇಂಜಾಡಿ ಮೊದಲಾದವರು ಉಪಸ್ಥಿತರಿದ್ದರು.
- ದೇವರ ಉತ್ಸವಾದಿಗಳ ವೀಕ್ಷಣೆ
- ಆಶ್ಲೇಷ ಬಲಿ ಸೇವೆ
ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ
ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೇವಣ್ಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ರಾತ್ರಿ ಭೇಟಿ ನೀಡಿ ದೇವರ ಉತ್ಸವಾದಿಗಳನ್ನು ವೀಕ್ಷಿಸಿದರು. ಗುರುವಾರ ದೇವಳದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು.
ಬಳಿಕ ದೇವರ ದರುಶನ ಮಾಡಿದ ಅವರಿಗೆ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಕಡಬ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೌಮ್ಯಾ ಭರತ್, ಪ್ರವೀಣ ರೈ, ಲೀಲಾ ಮನಮೋಹನ್, ಮಾಜಿ ಸದಸ್ಯರಾದ ಮಾಧವ ಡಿ., ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.