ಜಿಲ್ಲೆ

ಮದ್ಯದ ಚಟಕ್ಕೆ ಅಂಟಿಕೊಂಡಿದ್ದ ಉಡುಪಿ ಜಿಲ್ಲೆಯ ವ್ಯಕ್ತಿ ಸಾವು

ರಾಣೆಬೆನ್ನೂರ: ಮದ್ಯದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಮೃತಪಟ್ಟ ಘಟನೆ ಇಲ್ಲಿಯ ಮೃತ್ಯುಂಜಯ ನಗರದಲ್ಲಿ ಮಂಗಳವಾರ ಸಂಭವಿಸಿದೆ.
ಉಡುಪಿ ಜಿಲ್ಲೆ ಹೆಬ್ರಿ ಗ್ರಾಮದ ಕೃಷ್ಣಮೂರ್ತಿ ಶಂಕರ ನಾಯ್ಕ (37) ಮೃತ ವ್ಯಕ್ತಿ.
ಈತ ನಗರದ ಖಾಸಗಿ ಫೈನಾನ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದ. ಇದರಿಂದಾಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.