ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್‌ನ ‘ಸ್ವರ್ಣ ಸಂಭ್ರಮ’ ಕಾರ್ಯಕ್ರಮ ಸೆ.3ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.
ಬೆಳಗ್ಗೆ 10ಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಆರ್.ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಕೆ.ಮೋನಪ್ಪ ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಅಸೋಸಿಯೇಶನ್‌ನ ಅಧ್ಯಕ್ಷ ಆನಂದ ಕೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಧ್ಯಾಹ್ನ 2.30ಕ್ಕೆ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಎಂ.ದಿನೇಶ್ ಕುಂಪಲ ವಹಿಸಲಿದ್ದಾರೆ. 6ಕ್ಕೆ ನಮ್ಮ ಕಲಾವಿದೆರ್ ಬೆದ್ರ ತಂಡದಿಂದ ‘ತೆಲಿಕೆದ ಗೊಂಚಿಲ್’ ವೈವಿಧ್ಯಮಯ ಹಾಸ್ಯ ಕಾರ್ಯಕ್ರಮ ಜರಗಲಿದೆ ಎಂದು ಅವರು ತಿಳಿಸಿದರು.