ಜಿಲ್ಲೆ

ಕನ್ನಡ ಪರ ಹೋರಾಟಗಾರ ತಾಯೂರು ವಿಠಲಮೂರ್ತಿ ನಿಧನ

ಮಂಜುನಾಥ ತಿಮ್ಮಯ್ಯ

ಮೈಸೂರು: ಕನ್ನಡ ಪರ ಹೋರಾಟಗಾರ ತಾಯೂರು ವಿಠಲಮೂರ್ತಿ (81) ಹೃದಯಾಘಾತದಿಂದ ಮಂಗಳವಾರ ಬೆಳಗ್ಗೆ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.


ನಗರದ ಅಗ್ರಹಾರದ ತ್ಯಾಗರಾಜ ರಸ್ತೆಯ 5ನೇ ಅಡ್ಡರಸ್ತೆಯ ನಿವಾಸಿಯಾಗಿದ್ದ ಇವರು ಮೈಸೂರು ಜಿಲ್ಲಾ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾಗಿದ್ದರು.

ಕೆ.ಆರ್.ಬ್ಯಾಂಕಿನ ಅಧ್ಯಕ್ಷರಾಗಿ, ಕನ್ನಡ ಹಿರಿಮೆ ಎಂಬ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿ ಹಾಗೂ ಮೈಸೂರು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಸ್ವಗ್ರಾಮವಾದ ಮೈಸೂರು ತಾಲೂಕಿನ ತಾಯೂರಲ್ಲಿ ಅಂತ್ಯಕ್ರಿಯೆ ನಡೆಯಿತು.