ಜಿಲ್ಲಾಧಿಕಾರಿ ದಿವಾಕರ ಎಂ.ಎಸ್.  
ಜಿಲ್ಲೆ

ಟಿಬಿಡ್ಯಾಂಗೆ‌ ನಿಷೇಧಾಜ್ಞೆ ಆದೇಶ ರದ್ದು

ಮಂಜುನಾಥ

ಹೊಸಪೇಟೆ: ತುಂಗಭದ್ರಾ ಜಲಾಶಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆ ಆದೇಶ ಸೋಮವಾರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹಿಂಪಡೆದಿದ್ದು, ಸೋಮವಾರದಿಂದ ಡ್ಯಾಂ ವೀಕ್ಷಣೆ ಮಾಡಬಹುದು.

ತುಂಗಭದ್ರಾ ಜಲಾಶಯದ 19ನೇ ಗೇಟ್ ದುರಂತದ ಹಿನ್ನೆಲೆಯಲ್ಲಿ ಜಲಾಶಯದ ಭದ್ರತೆ ಹಿತದೃಷ್ಟಿಯಿಂದ ಹಾಗೂ ತಜ್ಞರ ಸಲಹೆ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಶುಕ್ರವಾರ ಹಾಗೂ ಶನಿವಾರ ದುರಸ್ತಿ ಕಾರ್ಯ ಯಶಸ್ವಿಯಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಜಲಾಶಯ ವೀಕ್ಷಣೆಗೆ ಅವಕಾಶ ನೀಡುವ ನೀಡಲಾಗಿದೆ ಎಂದು ತಿಳಿಸಿದ್ದಾರೆ.